Sunday, December 22, 2024

ತಮಿಳುನಾಡು, ಕೇರಳದಲ್ಲಿ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 2-3 ದಿನಗಳಲ್ಲಿ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿರುಗಾಳಿಯ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಿಗ್ ಜಾಂ ಚಂಡಮಾರುತ ಈಗಾಗಲೇ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮುಂದಿನ 3 ದಿನಗಳ ಕಾಲ ಮತ್ತೆ ಮಳೆಯಾಗಲಿದ್ದು, ಜನರು ಭಯಗೊಂಡಿದ್ದಾರೆ.

ಇದನ್ನೂ ಓದಿ: ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ!

ತಮಿಳುನಾಡು ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಈಗಾಗಲೇ ಮಳೆಯಾಗಿದ್ದು ತಮಿಳುನಾಡಿನ ತಿರುನಲ್ವೇಲಿ ಮತ್ತು ಕೂನೂರಿನಲ್ಲಿ 2 ಸೆಂ.ಮೀ ಮಳೆ ದಾಖಲಾಗಿದ್ದರೆ, ಕೇರಳದ ವಡವತ್ತೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಡಿಸೆಂಬರ್ 4 ರಂದು ಭಾರೀ ಮಳೆ ಸುರಿದಾಗಿನಿಂದ ಚೆನ್ನೈನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿತ್ತು.

RELATED ARTICLES

Related Articles

TRENDING ARTICLES