Sunday, December 22, 2024

ಇಂದು ಭಾರತ- ಆಫ್ರಿಕಾ ಮೊದಲ ಟಿ-20 ಪಂದ್ಯ : ಗಿಲ್ ಜೊತೆ ಇನ್ನಿಂಗ್ಸ್ ಆರಂಭಿಸುವ ಬ್ಯಾಟರ್ ಯಾರು?

ಬೆಂಗಳೂರು : ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ-20 ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಇಶಾನ್ ಕಿಶನ್ ಹಾಗೂ ಯಶಸ್ವಿ ಜೈಸ್ವಾಲ್ ಎಡಗೈ ಬ್ಯಾಟರ್​ಳಾಗಿದ್ದಾರೆ. ಹಾಗೆಯೇ, ಶುಭ್​ಮನ್ ಗಿಲ್ ಹಾಗೂ ಋತುರಾಜ್ ಗಾಯಕ್ವಾಡ್ ಬಲಗೈ ಬ್ಯಾಟರ್​ಗಳಾಗಿದ್ದಾರೆ. ಗಿಲ್ ಇನ್ನಿಂಗ್ಸ್​ ಆರಂಭಿಸುವುದು ಬಹುತೇಕ ಖಚಿತ. ಆದರೆ, ಗಿಲ್ ಜೊತೆ ಯಾರು ಕಣಕ್ಕಿಳಿಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಈವರೆಗೆ ಭಾರತ ಡರ್ಬನ್ ಕ್ರೀಡಾಂಗಣದಲ್ಲಿ 5 ಟಿ-20 ಆಡಿದ್ದು, ಐದೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಹರಿಣಗಳನ್ನು ಬಗ್ಗುಬಡಿಯಲು ಭಾರತ ಸಜ್ಜಾಗಿದೆ.

ಡರ್ಬನ್ ಪಿಚ್ ಬೌನ್ಸ್ ಮತ್ತು ಸ್ವಿಂಗ್​ನಿಂದ ಕೂಡಿದ್ದು, ಬ್ಯಾಟರ್​ಗಳಿಗೆ ಸಹಕಾರಿಯಾಗಲಿದೆ. ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯಲ್ಲಿ 4-1 ಅಂತರದಲ್ಲಿ ಸರಣಿ ಗೆದ್ದು ಬೀಗಿದ್ದ ಭಾರತಕ್ಕೆ ಇದು ಅಗ್ನಿ ಪರೀಕ್ಷೆ. ಮುಂಬರುವ ಟಿ-20 ವಿಶ್ವಕಪ್ ದೃಷ್ಟಿಯಿಂದ ಯುವ ಆಟಗಾರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಲಾಗುತ್ತದೆ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ.), ಜಿತೇಶ್ ಶರ್ಮಾ (ವಿ.ಕೀ.), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.

ದಕ್ಷಿಣ ಆಫ್ರಿಕಾ ತಂಡ

ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾದ್ ವಿಲಿಯಮ್ಸ್.

RELATED ARTICLES

Related Articles

TRENDING ARTICLES