Sunday, January 19, 2025

ಅಯ್ಯೋ ಪಾಪ..! ಮಿನಿ ಬಸ್​ಗೆ ಕಾರು ಡಿಕ್ಕಿ, ಪ್ರೇಮಿಗಳು ಸಾವು

ರಾಮನಗರ : ಮಿನಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರೇಮಿಗಳಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ಶೈಲ(22) ಹಾಗೂ ದೀಪಕ್(25) ಮೃತ ಪ್ರೇಮಿಗಳು. ಮೃತರು ಕನಕಪುರದಿಂದ ದೀಪಕ್ ಸ್ವಗ್ರಾಮ ಕೆಬ್ಬಹಳ್ಳಿ ಗ್ರಾಮಕ್ಕೆ ಬರುತ್ತಿದ್ದರು. ಈ ವೇಳೆ ಓವರ್ ಟೇಕ್ ಮಾಡಲು ಹೋಗಿ ಮಿನಿ ಬಸ್‌ಗೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಕಾರು ಸಂಪೂರ್ಣ ಜಖಂ

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಕಾರಿನಲ್ಲಿದ್ದ ಶೈಲ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೀಪಕ್‌ಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES