ಚಾಮರಾಜನಗರ: ಇ-ಸ್ಕೂಟರ್‌ಗಳತ್ತ ಜನರು ಇತ್ತೀಚಿಗೆ ಹೆಚ್ಚಿನ ಒಲವು ತೋರುತ್ತಿದ್ಧಾರೆ. ಆದರೆ ಇದರಿಂದ ಬಾರೀ ಅವಘಡಗಳು ಸಂಭವಿಸುತ್ತಿವೆ. ಇದೀಗ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ನಿಕ್ ಸ್ಕೂಟರ್ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆಯೊಂದು ನಡೆದಿದೆ.
ಹೌದು, ಮುಬಾರಕ್ ಮೊಹಲ್ಲಾ ನಿವಾಸಿ ಅನಾದುಲ್ಲಾ ಎಂಬವರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಇ-ಸ್ಕೂಟರ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸ್ಪೋಟಗೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದ್ದು, ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಮುಬಾರಕ್ ಮೊಹಲ್ಲಾದಲ್ಲಿ ನಡೆದ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.