Monday, December 23, 2024

ಬೆಳಗಾವಿ ಜಿಲ್ಲೆ ವಿಭಜನೆ ಪ್ರಸ್ತಾಪ ಬಂದರೆ ಸಹಮತ: ಡಿ.ಕೆ.ಶಿವಕುಮಾ‌ರ್

ಬೆಳಗಾವಿ: ಉತ್ತರ ಕರ್ನಾಟಕ ಸಮಸ್ಯೆಗೆ ಸ್ಪಂದಿಸಲು ಸರ್ಕಾರ ಬದ್ಧ ಎಂದು ಉಪಮುಖ್ಯಮಂತ್ರಿ ಹೇಳಿದ್ಧಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಿಸಿದಂತೆ ಸದನದಲ್ಲಿ ಪ್ರಸ್ತಾಪ ಬಂದರೆ ಖಂಡಿತವಾಗಿಯೂ ಸಕಾರಾತ್ಮಕ ಚರ್ಚೆ ನಡೆಸುತ್ತೇವೆ’ ಎಂದು ಹೇಳಿದರು.

ಜಿಲ್ಲೆ ವಿಭಜನೆ ಕುರಿತು ಮೇಲಿಂದ ಮೇಲೆ ಧ್ವನಿ ಕೇಳಿಬರುತ್ತಿದೆ. ಸದನದಲ್ಲಿ ಚರ್ಚಿಸೋಣ ಎಂದರು.

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಎಲ್ಲ ಸೇರಿ ನಮ್ಮದು ಸಮಗ್ರ ಕರ್ನಾಟಕ. ಈ ಭಾಗದ ಶಾಸಕರು ಉತ್ತರ ಕರ್ನಾಟಕ ವಿಷಯಗಳನ್ನು ಚರ್ಚೆಗೆ ಎತ್ತಿಕೊಂಡರೆ ಸರ್ಕಾರ ಸ್ಪಂದಿಸುತ್ತದೆ ಎಂದು ಉತ್ತರಿಸಿದರು.

 

 

 

RELATED ARTICLES

Related Articles

TRENDING ARTICLES