ಹಾಸನ: ಅರ್ಜುನನ ಕಾಲಿಗೆ ಯಾವುದೇ ಗುಂಡೇಟು ಬಿದ್ದಿಲ್ಲ. ನಮ್ಮ ಕಾರ್ಯಾಚರಣೆ ತಂಡದ ಬಳಿ ಬಂದೂಕು ಇರಲಿಲ್ಲ. ನಮ್ಮ ಸಿಬ್ಬಂದಿ ಬಳಿ ಇದ್ದದ್ದು ಡಬಲ್ ಬ್ಯಾರೆಲ್ ಚರ್ರೆ ಕೋವಿ ಮಾತ್ರ, ಅದರಲ್ಲಿ ಆನೆ ಸಾಯುವುದಿಲ್ಲ ಎಂದು ವನ್ಯಜೀವಿ ವೈದ್ಯ ರಮೇಶ್ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಕಾರ್ಯಾಚರಣೆ ವೇಳೆ ಯಾವುದೇ ಲೋಪ ಆಗಿಲ್ಲ. ಕಾಡಾನೆ ದಾಳಿಯಿಂದ ಅರ್ಜುನ ಮೃತಪಟ್ಟಿದೆ. ಬಹುಶಃ ಮಾವುತ ವಿನು ಅರ್ಜುನನ ಮೇಲೆ ಇದ್ದಿದ್ದರೆ ಹೋರಾಟ ಮಾಡಬಹುದಿತ್ತಾ ಅಥವಾ ಆಗಲು ಹೀಗೆ ಆಗುತ್ತಿತ್ತ ಎಂದು ಹೇಳುವುದು ಕಷ್ಟ ಎಂದಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಸ್ನೇಹಿತ್ ಔಟ್ : ಕಣ್ಣೀರಿಟ್ಟ ನಮ್ರತಾ ಗೌಡ!
ಆ ಮೂಲಕ ಅರ್ಜುನನ ಸಾವಿನ ಬಗ್ಗೆ ಹರಡಿದ್ದ ಹಲವು ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಾಚರಣೆ ದಿನವಾದ ಡಿಸೆಂಬರ್ 4 ರಂದು ನಾನು, ಆನೆ ಮಾವುತ ವಿನು ಹಾಗೂ ಕರ್ನಾಟಕ ಭೀಮ ಆನೆಯ ಮಾವುತ ಗುಂಡ, ಅರ್ಜುನನ ಮೇಲೆ ಕುಳಿತಿದ್ದೆವು. ಪ್ರಶಾಂತ್ ಆನೆ ಮೇಲೆ ಕೊಡಗಿನ DRFO ರಂಜನ್ ಇದ್ದರು. ವಿಕ್ರಾಂತ್ ಹೆಸರಿನ ಒಂದು ಹಾಗೂ ಮತ್ತೊಂದು ಸಲಗ ಸೇರಿ ಎರಡು ಆನೆಗಳ ಸೆರೆಗೆ ಟಾರ್ಗೆಟ್ ಫಿಕ್ಸ್ ಆಗಿತ್ತು ಎಂದು ಕಾರ್ಯಾಚರಣೆಯ ಮಾಹಿತಿ ಬಿಚ್ಚಿಟ್ಟಿದ್ದಾರೆ.