Sunday, May 12, 2024

ಆರ್ಟಿಕಲ್ 370 ರದ್ದು : ಸುಪ್ರೀಂ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ : ಪ್ರಮೋದ್ ಮುತಾಲಿಕ್

ಮೈಸೂರು : ಆರ್ಟಿಕಲ್ 370 ರದ್ದು ಮಾಡಿದ್ದನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವ ವಿಚಾರ ಕುರಿತು ಶ್ರೀ ರಾಮ‌ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ದೇಶದ 140 ಕೋಟಿ ಜನರಿಗೂ ಹರ್ಷ ತಂದಿದೆ. ಆನಂದವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ವಿಧಿ ಮರು ಜಾರಿಗೊಳಿಸುವುದಾಗಿ ಹೇಳಿತ್ತು. ಇದೀಗ ನ್ಯಾಯಾಲಯ ನೀಡಿರುವ ತೀರ್ಪಿನಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. 370ನೇ ವಿಧಿ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರುಕಳಿಸಿದೆ ಎಂದು ಕಾಂಗ್ರೆಸ್​ ವಿರುದ್ಧ ಕುಟಕಿದ್ದಾರೆ.

ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ

ಜಮ್ಮು ಕಾಶ್ಮೀರದಲ್ಲಿ ಸಣ್ಣಪುಟ್ಟ ಭಯೋತ್ಪಾದನೆ ಕೃತ್ಯಗಳು ನಡೆಯುತ್ತಿವೆ ಅಷ್ಟೇ. ಕಲ್ಲು ಹೊಡೆಯುತ್ತಿದ್ದವರು ಕಾಲೇಜಿಗೆ ಹೋಗುತ್ತಿದ್ದಾರೆ‌. ಅಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿ ಆಗುತ್ತಿದೆ. ಇದಕ್ಕೆ ಕಾರಣರಾದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES