Wednesday, January 8, 2025

ಪ್ರೀತಿಸಿದ ಯುವತಿ ಜೊತೆ ಓಡಿ ಹೋದ ಮಗ; ತಾಯಿಯನ್ನೇ ಬೆತ್ತಲೆಗೊಳಿಸಿದ ಕ್ರೂರಿಗಳು

ಬೆಳಗಾವಿ: ಪ್ರೀತಿಸಿದ ಯುವತಿ ಜೊತೆ ಹೋದ ಮಗ ತಾಯಿಯನ್ನಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಹೀನ ಕೃತ್ಯ ನಗರದ ವಂಟಮೂರಿ ಗ್ರಾಮದ ಬಸವೇಶ್ವರ ಗಲ್ಲಿಯಲ್ಲಿ ನಡೆದಿದೆ.

ಹೌದು,ಯುವಕನೊಬ್ಬ ಪ್ರೀತಿಸಿದ ಯುವತಿ ಜತೆಗೆ ಮನೆ ಬಿಟ್ಟು ಓಡಿ ಹೋಗಿದ್ದ.ಇದರಿಂದ ಆಕ್ರೋಶಗೊಂಡು ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿದ ದುರುಳರು ದುರ್ವರ್ತನೆ ತೋರಿದ್ದಾರೆ.

ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿ 42 ವರ್ಷದ ಸಂಗಮ್ಮ ಜೊತೆ ಅಮಾವೀಯವಾಗಿ ನಡೆದುಕೊಳ್ಳಲಾಗಿದೆ. ಸಂಗಮ್ಮ ಪುತ್ರ ದುಂಡಪ್ಪ ಅದೇ ಗ್ರಾಮದ ಪ್ರಿಯಾಂಕಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದನು.

ಸೋಮವಾರ ಪ್ರಿಯಾಂಕಾ ನಿಶ್ಚಿತಾರ್ಥವನ್ನು ಕುಟುಂಬಸ್ಥರು ನಿಶ್ಚಯಿಸಿದ್ದರು. ಆದ್ರೆ ಭಾನುವಾರ ರಾತ್ರಿಯೇ ದುಂಡಪ್ಪ ಮತ್ತು ಪ್ರಿಯಾಂಕಾ ಓಡಿ ಹೋಗಿದ್ದರು.

ಇದನ್ನೂ ಓದಿ: ಸರ್ಕಾರ ಪತನವಾಗುವುದು ಖಚಿತ : ಹೆಚ್‍ಡಿಕೆ ಸ್ಫೋಟಕ ಭವಿಷ್ಯ

ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ದುಂಡಪ್ಪ ಮನೆಗೆ ಬಂದು ಸಂಗಮ್ಮ ಅವರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ. ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ನಂತರ ಸಂಗಮ್ಮ ಅವರನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿರೋ ಆರೋಪ ಸಹ ಕೇಳಿ ಬಂದಿದೆ.

ಏಳು ಮಂದಿ ಅರೆಸ್ಟ್ 

ಈ ವಿಷಯವನ್ನು ಕೆಲ ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಾಕತಿಯ ಠಾಣೆಯ ಪೊಲೀಸರು ಪ್ರಕರಣ ಸಂಬಂಧ ಏಳು ಜನರನ್ನು ಬಂಧಿಸಿದ್ದಾರೆ. ಸದ್ಯ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 2 ಕೆಎಸ್‌‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ.

ಪೊಲೀಸ್ ಆಯುಕ್ತರ ಭೇಟಿ

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಆಯುಕ್ತರು, ಘಟನೆ ಸಂಬಂಧ ಮಹಿಳೆಯರು ಸೇರಿ ಏಳು ಜನರನ್ನ ಬಂಧಿಸಿದ್ದೇವೆ ಎಂದರು.

ಮಹಿಳೆಗೆ ಚಿಕಿತ್ಸೆ

ಮಹಿಳೆಯನ್ನ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಅಂತಾ ಗೊತ್ತಾಗಿದೆ. ಮಾಹಿತಿ ಬಂದ ಕೂಡಲೇ ನಮ್ಮ ಸಿಬ್ಬಂದಿ ಬಂದು ಮಹಿಳೆ ರಕ್ಷಣೆ ಮಾಡಿ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರು ಎಸ್ಕೇಪ್ ಆಗಿದ್ದು, ಅವರ ಶೋಧ ನಡೆಸುತ್ತಿದ್ದೇವೆ. ಹಲ್ಲೆಗೊಳಗಾದ ಮಹಿಳೆಯ ಮಗ ಮತ್ತು ಯುವತಿ ಓಡಿ ಹೋಗಿದ್ದಾರೆ.

RELATED ARTICLES

Related Articles

TRENDING ARTICLES