ಬೆಂಗಳೂರು: ಈರುಳ್ಳಿ ಆಯ್ತು ಈಗ ಬೆಳ್ಳುಳ್ಳಿ ಸರದಿ. ಗಗನಕ್ಕೇರಿರುವ ಬೆಳ್ಳುಳ್ಳಿ ಬೆಲೆ ಸಾಮಾನ್ಯ ಗ್ರಾಹಕನ ಜೇಬು ಸುಡುತ್ತಿದೆ.
ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300-400ರೂ. ತಲುಪಿದೆ. ಹವಾಮಾನ ವೈಪರೀತ್ಯದಿಂದಾಗಿ ಬೆಳ್ಳುಳ್ಳಿ ಫಸಲು ಉತ್ತಮವಾಗಿರದ ಕಾರಣ ಈ ಬಾರಿ ಮಹಾರಾಷ್ಟ್ರದಿಂದ ಇದರ ಪೂರೈಕೆ ತಗ್ಗಿದೆ. ನಾಸಿಕ್ ಹಾಗೂ ಪುಣೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ.
ಇದನ್ನೂ ಓದಿ: ಮಳೆಯ ಆರ್ಭಟದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!
ಆದರೆ, ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಚೆನ್ನಾಗಿ ಬಂದಿಲ್ಲ. ಹೀಗಾಗಿ ಮುಂಬೈನಲ್ಲಿರುವ ಬೆಳ್ಳುಳ್ಳಿ ಸಗಟು ವ್ಯಾಪಾರಿಗಳು ನೆರೆಯ ರಾಜ್ಯಗಳಾದ ಗುಜರಾತ್, ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದ ಬೆಳ್ಳುಳ್ಳಿ ಖರೀದಿಸುತ್ತಿದ್ದಾರೆ. ಇದರಿಂದ ಸಾಗಣೆ ವೆಚ್ಚ ಹಾಗೂ ಸ್ಥಳೀಯ ತೆರಿಗೆಗಳ ಕಾರಣಕ್ಕೆ ಬೆಳ್ಳುಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.