Sunday, May 19, 2024

ಜಾತಿ ಗಣತಿಗೆ ನನ್ನ ವಿರೋಧವಿಲ್ಲ: ಡಿ.ಕೆ ಶಿವಕುಮಾರ್ 

ಬೆಂಗಳೂರು: ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ.ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಇರಬೇಕು ಅಷ್ಟೇ ಎಂಬುವುದೇ ನನ್ನ ಅಭಿಪ್ರಾಯ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ,  ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು ಎಂದರು.

ಇದನ್ನೂ ಓದಿ: ಸಾಕು ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕು ಇರಿದ ಪಾಪಿಗಳು

ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.

ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದರು.

 

RELATED ARTICLES

Related Articles

TRENDING ARTICLES