Friday, May 17, 2024

ಅನೈತಿಕ ಸಂಬಂಧಕ್ಕೆ ಅಡ್ಡಿ: ಪತ್ನಿಗೆ ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ ಪಾಪಿ ಗಂಡ

ಚಿಕ್ಕಮಗಳೂರು : ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.

ಪತಿ ವಿಷದ ಇಂಜೆಕ್ಷನ್ ನೀಡಿ ಹತ್ಯೆ ಮಾಡಿದ್ದಾರೆ ಎಂದು ಗೃಹಿಣಿ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾವನ್ನಪ್ಪಿರುವ ಮಹಿಳೆಯನ್ನು 31 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಮನೆಯಲ್ಲಿ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಪತಿ ದರ್ಶನ್ ಜೊತೆ ಶ್ವೇತಾ ವಾಸವಾಗಿದ್ದರು.

ಇದನ್ನೂ ಓದಿ: ಮೊಬೈಲ್‌ ರಿಪೇರಿ ಮತ್ತು ಸೇವೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

 ಘಟನೆಯ ವಿವರ:

ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ದರ್ಶನ್ ನಾಲ್ಕು ದಿನಗಳ ಹಿಂದೆ ಪತ್ನಿ ಜೊತೆ ಆಗಮಿಸಿದ್ದರು. ಮನೆಯಲ್ಲಿಯೇ ಶ್ವೇತಾ ಸಾವನ್ನಪ್ಪಿದ್ದು, ತರಾತುರಿಯಲ್ಲಿ ಅಂತ್ಯಕ್ರಿಯೆಗೆ ದರ್ಶನ್ ಕುಟುಂಬದವರು ಸಿದ್ದತೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಹೃದಯಾಘಾತದಿಂದ ಶ್ವೇತಾ ಸಾವನ್ನಪ್ಪಿದ್ದಾಳೆ ಎಂದು ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ಅಂತ್ಯಕ್ರಿಯೆಗೆ ಸಿದ್ಧವಾಗಿದ್ದಾಗ ಶ್ವೇತಾ ಕುಟುಂಬದವರು ತಡೆದು ಶವವನ್ನು ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದರು.

 

RELATED ARTICLES

Related Articles

TRENDING ARTICLES