Sunday, May 19, 2024

ಮಳೆಯ ಆರ್ಭಟದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ರಾಜ್ಯದ ಹಲವೆಡೆ ವ್ಯಾಪಕ ಮಳೆ ಮುಂದುವರಿಯುವ ಸಾಧ್ಯತೆ ಇದ್ದು  ಕರಾವಳಿ ಹಾಗೂ ದಕ್ಷಿಣ ಒಳನಾಡು ಪೈಕಿ ಕರಾವಳಿಯಲ್ಲಿ ಇಂದಿನಿಂದ ಎರಡು ದಿನ ಮಳೆ ಆರ್ಭಟ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ದಿನಗಳಿಂದ ಮಳೆ ಬೀಳುವಿಕೆ ಪ್ರಮಾಣದಲ್ಲಿ ಇಳಿಕೆ ಆಗಿದೆ. ಹೀಗಿದ್ದರೂ ಸಹಿತ ಕರಾವಳಿಯ ಜಿಲ್ಲೆಗಳು, ಮಲೆನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸೋಮವಾರ ಉತ್ತಮ ಮಳೆ ಆಗಿದೆ. ಈ ಮಳೆ ಇನ್ನು ಕೆಲವು ದಿನ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಎಂಬ ಮುನ್ಸೂಚನೆ ಇದೆ.

ಇದನ್ನೂ ಓದಿ: ಶಬರಿಮಲೆಗೆ ಹೊರಟ ಮಾಲಾಧಾರಿ ಭಕ್ತರಿಗೆ ಸಿಹಿಸುದ್ದಿ!

ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆ ಸಕ್ರಿಯವಾಗಿ ಮುಂದುವರಿಯಲಿದೆ. ಈ ಭಾಗದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಆಗಾಗ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ. ಇದರ ಹೊರತು ರಾಜ್ಯದಲ್ಲಿ ಗಂಭೀರ ಸ್ವರೂಪದ ಹವಾಮಾನ ಬದಲಾವಣೆಗಳು ಇಲ್ಲ ಎಂದು ತಿಳಿದು ಬಂದಿದೆ.

ಉತ್ತರ ಒಳನಾಡಿನಲ್ಲಿ ಸದ್ಯ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಅಧಿಕ ತಾಪಮಾನ ಉಂಟಾಗಲಿದ್ದು, ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಕೆಲವು ದಿನಗಳಲ್ಲಿ ಬೆಳಗ್ಗೆ ಮತ್ತು ತಡರಾತ್ರಿ ಚಳಿ ವಾತಾವರಣ ಕಂಡು ಬರಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ, ಆಗಾಗ ಮೋಡ ಕವಿದ ವಾತಾವರಣ ಉಂಟಾಗಲಿದೆ. ಉಳಿದಂತೆ ಇಲ್ಲಿ ಒಂದೆರಡು ಕಡೆ ಮಳೆ ಸುರಿಯುವ ಲಕ್ಷಣಗಳು ಇವೆ. ತಾಪಮಾನದಲ್ಲಿ ತುಸು ಇಳಿಕೆ ಕಂಡು ಬರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES