Sunday, May 12, 2024

ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ-20 ಪಂದ್ಯ : ಇಂದಿನ ಪಂದ್ಯವೂ ಮಳೆಯಿಂದ ರದ್ದು?

ಬೆಂಗಳೂರು : ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ-20 ಪಂದ್ಯ ಇಲ್ಲಿನ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ನಡೆಯಲಿದೆ.

ಭಾನುವಾರ ನಡೆಯಬೇಕಿದ್ದ ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದರಿಂದ ಕ್ರಿಕೆಟ್ ಅಭಿಮಾನಿಗಳು ನಿರಾಸೆಗೊಂಡಿದ್ದರು. 3 ಪಂದ್ಯಗಳ ಸರಣಿ ಇದಾಗಿದ್ದು, ಭಾರತಕ್ಕೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಇಂದಿನ ಪಂದ್ಯ ನಡೆಯುವ ಗೆಬರ್ಹಾದಲ್ಲಿಯೂ ಮೋಡ ಕವಿದ ವಾತಾವರಣವಿದೆ. ಹೀಗಿರುವಾಗ ಇಂದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗುವ ಸಾಧ್ಯತೆಯಿದೆ. ಶೇ.60ತರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಆಫ್ರಿಕನ್ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗಬಾರದು ಎಂದು ಪ್ರಾರ್ಥಿಸುತ್ತಿದ್ದಾರೆ.

ಪಂದ್ಯ ಆರಂಭ : ರಾತ್ರಿ 8.30 (ಭಾರತೀಯ ಕಾಲಮಾನ)

ಸ್ಥಳ : ಸೇಂಟ್ ಜಾರ್ಜ್ ಪಾರ್ಕ್, ​ಗೆಬರ್ಹಾ, ದಕ್ಷಿಣ ಆಫ್ರಿಕಾ

ಪ್ರಸಾರ ಹಕ್ಕು : ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌. (ಸ್ಟಾರ್​ ಸ್ಪೋರ್ಟ್ಸ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್​ನಲ್ಲಿ ಪಂದ್ಯ ವೀಕ್ಷಿಸಬಹುದು)

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ.), ಜಿತೇಶ್ ಶರ್ಮಾ (ವಿ.ಕೀ.), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್

ದಕ್ಷಿಣ ಆಫ್ರಿಕಾ ತಂಡ

ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾದ್ ವಿಲಿಯಮ್ಸ್

RELATED ARTICLES

Related Articles

TRENDING ARTICLES