ಬೆಂಗಳೂರು : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಕನ್ನಡಿಗರ ಹೆಸರನ್ನು ರಾಜ್ಯದ ವಿಮಾನ ನಿಲ್ದಾಣಗಳಿಗೆ ಇರಿಸುವ ಮೂಲಕ ಅವರ ಹೆಸರನ್ನು ಶಾಶ್ವತವಾಗುಳಿಸುವ ಪ್ರಯತ್ನ ನಮ್ಮದು ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡಬೇಕು. ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ ಎಂಬ ಹೆಸರಿಡಬೇಕು. ಈ ಕುರಿತು ಹೆಸರು ನಾಮಕರಣಕ್ಕೆ ಗೊತ್ತುವಳಿ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದ್ದಾರೆ.
ಔಷಧ ಸಂಶೋಧನೆಗೆ 52 ಲಕ್ಷ ಬಿಡುಗಡೆ
ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿನ ಪ್ರಮುಖ ಬೆಳೆಯಾಗಿರುವ ಅಡಿಕೆಗೆ ಹಳದಿ ಎಲೆ ಹಾಗೂ ಎಲೆ ಚುಕ್ಕೆ ರೋಗ ಕಾಡುತ್ತಿದೆ. ಈ ರೋಗವನ್ನು ನಿವಾರಿಸುವ ಸಲುವಾಗಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ರೋಗ ನಿವಾರಣೆ ಸಂಬಂಧ ಔಷಧ, ಕೀಟನಾಟಕಗಳ ಸಂಶೋಧನೆಗಾಗಿ ಈಗಾಗಲೇ 52 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಕನ್ನಡಿಗರ ಹೆಸರನ್ನು ರಾಜ್ಯದ ವಿಮಾನ ನಿಲ್ದಾಣಗಳಿಗೆ ಇರಿಸುವ ಮೂಲಕ ಅವರ ಹೆಸರನ್ನು ಶಾಶ್ವತವಾಗುಳಿಸುವ ಪ್ರಯತ್ನ ನಮ್ಮದು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ ಎಂಬ ಹೆಸರಿಡಬೇಕು ಎಂದು… pic.twitter.com/GezMrUchV0
— CM of Karnataka (@CMofKarnataka) December 13, 2023