Monday, December 23, 2024

ಮೆಟ್ರೋದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ಸ್ಟೇಷನ್‌ ಸೌಲಭ್ಯ!

ಬೆಂಗಳೂರು: ಮೆಟ್ರೋ ರೈಲು, ಕ್ಯಾಬ್, ಬಸ್ ಗಳು ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ಸೌಲಭ್ಯ ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ.

ನಿಲ್ದಾಣಗಳಲ್ಲಿ ಇ-ವಾಹನ ಚಾರ್ಜಿಂಗ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಹೇಳಿದರು. ಇತ್ತೀಚೆಗೆ ಬೆಂಗಳೂರು ಟೆಕ್ ಸಮ್ಮಿಟ್ʼನ ಎರಡನೇ ದಿನ ಭವಿಷ್ಯದ ಸಂಚಾರಕ್ಕಾಗಿ ಸಮನ್ವಯದ, ಸ್ವಾಯತ್ತ, ಹಂಚಿಕೆಯ ಮತ್ತು ಎಲೆಕ್ಟ್ರಿಕ್ ವ್ಯವಸ್ಥೆʼ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಇನ್ನು 6 ತಿಂಗಳಲ್ಲಿ ವಿವಿಧ ಮಹಾನಗರಗಳಲ್ಲಿ ಜಾರಿಗೊಳ್ಳಲಿದೆ ಎಂದರು.

ಇದನ್ನೂ ಓದಿ: ಬಸವ ಪುತ್ಥಳಿ ಹಣ ದುರುಪಯೋಗ: ತನಿಖೆಗೆ ಸಮಿತಿ ರಚನೆ!

ಪರಿಸರಸ್ನೇಹಿ ಸಂಚಾರ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ಮೆಟ್ರೋ ರೈಲು ನಿಲ್ದಾಣಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES