Monday, December 23, 2024

‘ಕಾಟೇರ’ ಚಿತ್ರದ ಟ್ರೈಲರ್ ಡಿಸೆಂಬರ್ 16ಕ್ಕೆ ಬಿಡುಗಡೆ

ಬೆಂಗಳೂರು : ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಕಾಟೇರ’ ಚಿತ್ರದ ಟ್ರೈಲರ್ ಇದೇ ಡಿಸೆಂಬರ್ 16ರಂದು ಶನಿವಾರ ಬಿಡುಗಡೆಯಾಗಲಿದೆ.

ಈ ಕುರಿತು ಚಿತ್ರದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಕಾಟೇರ ಚಿತ್ರದ ಟ್ರೈಲರ್ ಇದೇ ಡಿಸೆಂಬರ್ 16ಕ್ಕೆ ಬಿಡುಗಡೆ’ಯಾಗಲಿದೆ ಎಂದು ಪೋಸ್ಟರ್ ಹಂಚಿಕೊಂಡಿದ್ದಾರೆ.

ಡಿ ಬಾಸ್ ದರ್ಶನ್ ‘ಕಾಟೇರ’ನಾಗಿ ತೆರೆಮೇಲೆ ಅಬ್ಬರಿಸಲು ಕೆಲವೇ ದಿನಗಳು ಬಾಕಿ ಉಳಿದಿವೆ. ಸದ್ಯ ಚಿತ್ರತಂಡ ಒಂದೊಂದೇ ಹಾಡು ರಿಲೀಸ್ ಮಾಡಿ ಅಭಿಮಾನಿಗಳಿಗೆ ಕಿಕ್ ನಿಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ‘ಪಸಂದಾಗವನ್ನೆ’ ಹಾಗೂ ‘ಯಾವ ಜನುಮದ ಗೆಳತಿ’ ಹಾಡು ಅಭಿಮಾನಿಗಳ ಮನ ಗೆದ್ದಿದೆ. ಇದೀಗ ಟ್ರೈಲರ್ ದಿನಾಂಕ ಘೋಷಣೆಯಾಗಿದ್ದು, ದಾಸನ ಫ್ಯಾನ್ಸ್​ ಥ್ರಿಲ್ ಆಗಿದ್ದಾರೆ.

ಇದೇ ಡಿಸೆಂಬರ್ 29ರಂದು ಕಾಟೇರ ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿದೆ. ಈಗಾಗಲೇ ಡಿ ಬಾಸ್ ಫ್ಯಾನ್ಸ್ ಕಾಟೇರನಿಗೆ ಅದ್ದೂರಿ ಸ್ವಾಗತ ಕೋರಲು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ವರ್ಷದ ಕೊನೆಯ ಬಹುನಿರೀಕ್ಷಿತ ಚಿತ್ರವಾಗಿದ್ದು, ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ನಟ ದರ್ಶನ್ ಬಾಕ್ಸ್ ಆಫೀಸ್​​ನಲ್ಲಿ ಎಷ್ಟು ಕೋಟಿ ಲೂಟಿ ಮಾಡ್ತಾರೆ ಎಂದು ಕಾದುನೋಡಬೇಕಿದೆ.

RELATED ARTICLES

Related Articles

TRENDING ARTICLES