Wednesday, January 22, 2025

ಕೆಸೆಟ್ 2023 ಪರೀಕ್ಷೆ ದಿನಾಂಕ ಮತ್ತೆ ಮುಂದೂಡಿಕೆ: ಮುಂದಿನ ದಿನಾಂಕ ಯಾವುದು?

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಮತ್ತೊಮ್ಮೆ ಮುಂದೂಡಿದೆ. ಡಿಸೆಂಬರ್‌ 31ರಂದು ನಿಗದಿಯಾಗಿದ್ದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಿ, 2024ರ ಜನವರಿ 13ಕ್ಕೆ ಮುಂದೂಡಿದೆ. ಜತೆಗೆ ಕೆಲವು ಪರೀಕ್ಷೆ ಕೇಂದ್ರಗಳನ್ನೂ ಬದಲಾವಣೆ ಮಾಡಲಾಗಿದೆ.

ಪರೀಕ್ಷೆ ಕೇಂದ್ರ ಬದಲು

ಕೆಸೆಟ್‌-2023ಕ್ಕೆ ಆನ್‌ಲೈನ್‌ನಲ್ಲಿ ರಿಜಿಸ್ಟ್ರೇಷನ್‌ ಪಡೆಯುವ ವೇಳೆ ಕಲಬುರಗಿ ಆಯ್ಕೆ ಮಾಡಿಕೊಂಡಿದ್ದವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಬೇಕು. ವಿಜಯಪುರದ ಬದಲು ತುಮಕೂರು ನಗರದಲ್ಲಿ ಪರೀಕ್ಷೆ ಬರೆಯಬೇಕು ಎಂದು ಕೆಇಎ ಪ್ರಕಟಣೆ ತಿಳಿಸಿದೆ.

ಧಾರವಾಡ ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾವೇರಿ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಮತ್ತು ಮೈಸೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮಂಡ್ಯ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗುತ್ತದೆ. ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ.

ಪರೀಕ್ಷಾ ಕೇಂದ್ರಗಳು

ಬೆಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗ, ಕಲಬುರಗಿ, ಮಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ತುಮಕೂರು.

ಕೆಸೆಟ್‌ ಪರೀಕ್ಷೆಯು ಪತ್ರಿಕೆ-1 ಪರೀಕ್ಷೆಯನ್ನು 100 ಅಂಕಗಳಿಗೆ, ಪತ್ರಿಕೆ-2 ಪರೀಕ್ಷೆಯನ್ನು 200 ಅಂಕಗಳಿಗೆ ನಡೆಸಲಾಗುತ್ತದೆ.
ಆನ್‌ಲೈನ್‌ ಅರ್ಜಿಯಲ್ಲಿ ವಿಶೇಷ ಚೇತನ ಮೀಸಲಾತಿಯನ್ನು ಕೋರಿರುವ ಅಭ್ಯರ್ಥಿಗಳು, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್‌ನಲ್ಲಿ ಅರ್ಜಿದಾರರ ವಿವರಗಳು ಮತ್ತು ಲಿಪಿಕಾರರ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿದಾರರ ಮತ್ತು ಲಿಪಿಕಾರರ ವಿವರಗಳನ್ನು ಸಲ್ಲಿಸದ ವಿಶೇಷ ಚೇತನ ಅಭ್ಯರ್ಥಿಗಳು ಲಿಪಿಕಾರರ ಸೇವೆಯನ್ನು ಪಡೆಯಲು ಅರ್ಹರಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

 

 

 

 

 

RELATED ARTICLES

Related Articles

TRENDING ARTICLES