Monday, December 23, 2024

ಮಧ್ಯಪ್ರದೇಶದ ನೂತನ ಸಿಎಂ ಆಗಿ ಮೋಹನ್ ಯಾದವ್‌ ದೇವರ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕಾರ

ಭೋಪಾಲ್: ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್‌ ದೇವರ ಹೆಸರಿನಲ್ಲಿ ಪ್ರತಿಜ್ಞೆಮಾಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ್ದು,ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಧ್ಯಪ್ರದೇಶ ಉಪ ಮುಖ್ಯಮಂತ್ರಿಗಳಾಗಿ ಬಿಜೆಪಿ ನಾಯಕರಾದ ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ನೂತನ ಸಿಎಂ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ!

ಇಲ್ಲಿನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಯಾದವ್ ಅವರಿಗೆ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು. ಶಾಸಕರಾದ ರಾಜೇಂದ್ರ ಶುಕ್ಲಾ, ಜಗದೀಶ್ ದೇವಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕಳೆದ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

RELATED ARTICLES

Related Articles

TRENDING ARTICLES