Monday, December 23, 2024

ಮಧ್ಯಪ್ರದೇಶದಲ್ಲಿ ಧ್ವನಿವರ್ಧಕ ನಿಷೇಧ ಮಾಡಿದ ಸಿಎಂ ಮೋಹನ್ ಯಾದವ್

ಮಧ್ಯಪ್ರದೇಶ : ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೋಹನ್ ಯಾದವ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಮುಕ್ತ ಪ್ರದೇಶದಲ್ಲಿ ಮಾಂಸ ಮಾರಾಟವನ್ನೂ ನಿಷೇಧಿಸಿದ್ದಾರೆ.

ಶಬ್ದ ಮಾಲಿನ್ಯದಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ (ಸಂಗೀತ ವ್ಯವಸ್ಥೆ) ಬಳಕೆಯನ್ನು ನಿಷೇಧಿಸುವ ಜುಲೈ 2005ರ ಸುಪ್ರೀಂ ಕೋರ್ಟ್ ತೀರ್ಪನ್ನು ಈ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಮೋಹನ್ ಯಾದವ್ ಅವರು ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ರಾಜಧಾನಿ ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು. ಮೋಹನ್ ಯಾದವ್ ಅವರು ಉಜ್ಜಯಿನಿ ದಕ್ಷಿಣದ ಶಾಸಕರಾಗಿದ್ದಾರೆ.

RELATED ARTICLES

Related Articles

TRENDING ARTICLES