Sunday, May 12, 2024

3 ವರ್ಷದ ಪುಟ್ಟ ಕಂದಮ್ಮನ ಮೇಲೆ 55ರ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಯತ್ನ

ಮಂಡ್ಯ : 3 ವರ್ಷದ ಕಂದಮ್ಮನ ಮೇಲೆ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ನೀಚ ಕೃತ್ಯ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಶಿವಣ್ಣ (55) ಎಂಬಾತನೇ ಅತ್ಯಾಚಾರಕ್ಕೆ ಯತ್ನಿಸಿದ ಪಾಪಿ. ಆಟವಾಡುತ್ತಿದ್ದ ಪಕ್ಕದ ಮನೆಯ ಮಗುವನ್ನು ಆರೋಪಿ ಶಿವಣ್ಣ ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ವಿವಸ್ತ್ರಗೊಳಿಸಿದ್ದಾನೆ. ಬಳಿಕ, ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಈ ವೇಳೆ ಆ ಕಂದಮ್ಮ ಜೋರಾಗಿ ಅಳುವ ಶಬ್ದ ಕೇಳಿಸಿದೆ. ಕೂಡಲೇ ಅಕ್ಕಪಕ್ಕದ ನಿವಾಸಿಗಳು ಮನೆಯ ಬಾಗಿಲನ್ನು ಒಡೆದಿದ್ದು, ಆಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಜನರು ಮನೆಯೊಳಗೆ ಬರುತ್ತಿದ್ದಂತೆ ಆರೋಪಿ ಶಿವಣ್ಣ ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬಗ್ಗೆ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES