Friday, September 20, 2024

ಶೀಘ್ರವೇ ಪೆಟ್ರೋಲ್-ಡೀಸೆಲ್ ದರ ಇಳಿಕೆ!?

ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಬೇಸರದ ನಡುವೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶೀಘ್ರದಲ್ಲೇ ಕಡಿಮೆಯಾಗುವ ನಿರೀಕ್ಷೆಯಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರೀ ಇಳಿಕೆ ಕಂಡಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಳಿಸುವ ಬಗ್ಗೆ ದೊಡ್ಡ ಚಿಂತನೆ ನಡೆಸಿದೆ.

ಇದನ್ನೂ ಓದಿ: ಹೆಬ್ಬಾವನ್ನೇ ನುಂಗಲು ಯತ್ನಿಸಿದ ಕಾಳಿಂಗ ಸರ್ಪ!

2022ರಲ್ಲಿ ಕಚ್ಚಾತೈಲದ ಬೆಲೆ ಭಾರೀ ಏರಿಕೆಯಾಗಿದ್ದಾಗ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್‌ಗೆ 17 ರೂ. ಹಾಗೂ ಡೀಸೆಲ್‌ಗೆ 35 ರೂ. ವರೆಗೂ ಭಾರೀ ನಷ್ಟ ಅನುಭವಿಸುತ್ತಿದ್ದವು. ಆದರೆ, ಬಳಿಕ ದರದಲ್ಲಿ ಭಾರೀ ಇಳಿಕೆಯಾಗಿದ್ದು, ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್‌ಗೆ 7 ರಿಂದ10 ರೂ. ಹಾಗೂ ಡೀಸೆಲ್‌ಗೆ 3 ರಿಂದ 4 ರೂಪಾಯಿ ಲಾಭ ಮಾಡಿಕೊಳ್ಳುತ್ತಿವೆ.

ಕಳೆದ 3 ತಿಂಗಳಲ್ಲಿ ಸುಮಾರು 28,000 ಕೋಟಿ ರಷ್ಟು ಲಾಭ ಮಾಡಿಕೊಂಡಿದೆ. ಇತ್ತ ಲೋಕಸಭಾ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಉಳಿದಿದೆ. ಈ ಸಂದರ್ಭ ತೈಲ ಬೆಲೆ ಇಳಿಕೆ ಮಾಡಿದರೆ ಹಣದುಬ್ಬರವನ್ನೂ ಹತೋಟಿಗೆ ತರಬಹುದು. ಹೀಗಾಗಿ ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಶೀಘ್ರವೇ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಸಲು ಚಿಂತನೆ ನಡೆಸಿದೆ.

RELATED ARTICLES

Related Articles

TRENDING ARTICLES