Monday, December 23, 2024

ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣ: ವೀಡಿಯೋ ಪ್ರಸಾರಮಾಡದಂತೆ ಹೈಕೋರ್ಟ್​ ಎಚ್ಚರಿಕೆ!

ಬೆಂಗಳೂರು: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣವು ಇತ್ತೀಚೆಗೆ ಬೆಳಗಾವಿಯ ವೆಂಟಮೂರಿ ಗ್ರಾಮದಲ್ಲಿ ನಡೆದಿತ್ತು. ಸಂತ್ರಸ್ತೆಯ ಗುರುತು ಪತ್ತೆಯಾಗುವಂತೆ ವರದಿ ಮಾಡಿದ ಮಾಧ್ಯಮಗಳ ಕ್ರಮಕ್ಕೆ ರಾಜ್ಯ ಹೈಕೋರ್ಟ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಸಂತ್ರಸ್ತೆಯ ವಿಡಿಯೋ ಅಥವಾ ಫೋಟೋ ಪ್ರಸಾರ ಮಾಡದಂತೆ ಮಂಗಳವಾರ ಆದೇಶಿಸಿದೆ.

ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಬಗ್ಗೆ ಮಾಧ್ಯಮಗಳ ವರದಿಗಳನ್ನು ಗಮನಿಸಿದ ಹೈಕೋರ್ಟ್, ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಮತ್ತು ಘಟನೆಗೆ ಸಂಬಂಧಿಸಿದ ಯಾವುದೇ ವೀಡಿಯೊಗಳನ್ನು ಪ್ರಸಾರ ಮಾಡದಂತೆ ಎಲ್ಲಾ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಆದೇಶಿಸಿದೆ.

ಇದನ್ನೂ ಓದಿ: ಶೀಘ್ರವೇ ಪೆಟ್ರೋಲ್-ಡೀಸೆಲ್ ದರ ಇಳಿಕೆ!?

ಘಟನೆಯ ಸ್ಥಿತಿಗತಿ ವರದಿಯನ್ನು ಡಿಸೆಂಬರ್ 14 ರಂದು ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಹೈಕೋರ್ಟ್ ಸೂಚಿಸಿದೆ. ಗೃಹ ಸಚಿವರು ಸಂತ್ರಸ್ತೆಯನ್ನು ಭೇಟಿಯಾದ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ಫೋಟೋದಲ್ಲಿ ಸಂತ್ರಸ್ತೆಯ ಗುರುತು ಸಿಗುವಂತೆ ಇದೆ. ಇದು ಮಾಧ್ಯಮದವರ ಅತ್ಯಂತ ಬೇಜವಾಬ್ದಾರಿ ಮತ್ತು ಸಂವೇದನಾರಹಿತವರ್ತನೆ ಹೈಕೋರ್ಟ್ ಕಿಡಿ ಕಾರಿದೆ.

ವಿದ್ಯುನ್ಮಾನ ಮಾಧ್ಯಮದಲ್ಲಿ ಈಗಾಗಲೇ ಅಂತಹ ಸಂದರ್ಶನವನ್ನು ಪ್ರದರ್ಶಿಸಿದರೆ ಅಥವಾ ಪ್ರಸಾರ ಮಾಡಿದರೆ, ಇನ್ನು ಮುಂದೆ ಯಾವುದೇ ಪ್ರದರ್ಶನ ಅಥವಾ ಪ್ರಸಾರ ಮಾಡಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

RELATED ARTICLES

Related Articles

TRENDING ARTICLES