Wednesday, January 22, 2025

ಮೈಸೂರು ಮಾದರಿಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ!

ಬೆಂಗಳೂರು ಗ್ರಾಮಾಂತರ: ಮೈಸೂರು ಮಾದರಿಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿ ಬೆಳಕಿಗೆ ಬಂದಿದೆ.

ವೈದ್ಯ ಶ್ರೀನಿವಾಸ್​ಗೆ ಸೇರಿದ SPG ಆಸ್ಪತ್ರೆ, ಡಯಾಗ್ನೋಸ್ಟಿಕ್ ಸೆಂಟರ್​ನಲ್ಲಿ ದಾಖಲಾತಿ ಪರಿಶೀಲನೆಗೆ ಬಂದಿದ್ದ ‌ವೇಳೆ ಲೈವ್​ನಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ 5 ತಿಂಗಳ ಗರ್ಭಿಣಿಗೆ ಗರ್ಭಪಾತ ಮಾಡಿ ಭ್ರೂಣ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: KCC ಕ್ರಿಕೆಟ್ ಟೂರ್ನಮೆಂಟ್‌ ಸೀಸನ್ 4ಕ್ಕೆ ದಿನಗಣನೆ!

ಕಳೆದ 1 ವಾರದಿಂದ ಆಸ್ಪತ್ರೆ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಹಲವು ದಾಖಲೆಗಳ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಅನುಮಾನ ಬಂದಿದ್ದರಿಂದ ಮತ್ತೊಮ್ಮೆ ಪರಿಶೀಲನೆಗೆ ಅಧಿಕಾರಿಗಳ ತಂಡ ಆಗಮಿಸಿದೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆ ಒಳಪ್ರವೇಶಿಸುವ ವೇಳೆ ಗರ್ಭಪಾತ ಮಾಡಿಸಿಕೊಂಡು ಮಹಿಳೆ ಹೊರಬಂದಿದ್ದಾಳೆ. ಕೂಡಲೇ ಅಲರ್ಟ್ ಆದ ಅಧಿಕಾರಿಗಳಿಂದ ಮತ್ತಷ್ಟು ತೀವ್ರ ತನಿಖೆ ಮಾಡಲಾಗಿದ್ದು, ಸ್ಥಳಕ್ಕೆ ರಾಜ್ಯ ಆರೋಗ್ಯ ಇಲಾಖೆಯ ನೋಡಲ್ ಅಧಿಕಾರಿ ವಿವೇಕ್ ದೊರೆ ಹಾಗೂ ಶ್ರೀನಿವಾಸ್ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿನ ಸಂಪೂರ್ಣ ದಾಖಲೆ ಪರಿಶೀಲಿಸಿದ್ದಾರೆ.

RELATED ARTICLES

Related Articles

TRENDING ARTICLES