Monday, May 20, 2024

ಸ್ಮೋಕ್​ ಬಾಂಬ್ ದಾಳಿ ಬೆನ್ನಲ್ಲೆ ಬೆಳಗಾವಿ ಸುವರ್ಣ ಸೌಧ ಸುತ್ತ ಕಟ್ಟೆಚ್ಚರ!

ಬೆಳಗಾವಿ: ಸಂಸತ್ ನಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ರಾಜ್ಯದ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಇದಕ್ಕೆ ಸಂಬಂಧಿಸಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತಮ್ಮ ಚೇಂಬರ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಭದ್ರತಾ ಸಿಬ್ಬಂದಿಗಳಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನಗಳನ್ನು ನೀಡಿದರು, ಶಾಸಕರು ಮತ್ತು ಮಂತ್ರಿಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳ ಮೇಲೆ ಮೇಲ್ವಿಚಾರಣೆಯ ಮಹತ್ವವನ್ನು ಒತ್ತಿ ಹೇಳಿದರು. ಅಲ್ಲದೆ, ಅಧಿಕೃತ ಸಿಬ್ಬಂದಿಗೆ ಮಾತ್ರ ಅವಕಾಶ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನು ಓದಿ: ಕಾಂಗ್ರೆಸ್​ ಔತಣಕೂಟದಲ್ಲಿ ಬಿಜೆಪಿ ಶಾಸಕ ಸೋಮಶೇಖ‌ರ್, ಹೆಬ್ಬಾರ್ ಭಾಗಿ!

ಏತನ್ಮಧ್ಯೆ, ಭದ್ರತಾ ಸಿಬ್ಬಂದಿಗಳು ಸುರ್ವಣಸೌಧ ಪ್ರವೇಶಿಸುವ ಪ್ರತೀ ವ್ಯಕ್ತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.  ಮಾನ್ಯ ಪಾಸ್‌ಗಳನ್ನು ಹೊಂದಿರುವವರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತಿದೆ.

RELATED ARTICLES

Related Articles

TRENDING ARTICLES