Wednesday, January 22, 2025

ದೇವಾಲಯದ ಅವ್ಯವಸ್ಥೆ: ಅಯ್ಯಪ್ಪನ ದರ್ಶನ ಸಿಗದೆ ಭಕ್ತರು ವಾಪಸ್!

ಕೇರಳ: ಅಯ್ಯಪ್ಪನ ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ ತೆರಳಿದ್ದ ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ವಾಪಸ್ಸಾಗುತ್ತಿದ್ದಾರೆ.

ದೇವರ ದರ್ಶನಕ್ಕೆ ಭಕ್ತರು ಹಲವು ಗಂಟೆಗಳ ಕಾಲ ಅನ್ನ, ನೀರು ಇಲ್ಲದೇ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಭಕ್ತರ ನಿರ್ವಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇವಸ್ಥಾನ ಮಂಡಳಿ ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದಾರೆ. ಇದರ ಪರಿಣಾಮ ಭಕ್ತರು ಕೇರಳ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬೈಕ್ ಡಿಕ್ಕಿ : ಎಂಎಲ್​ಸಿ ಅರವಿಂದ ಅರಳಿ ತಾಯಿ ಸಾವು

ಈ ನಡುವೆ ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪೊಲೀಸರು ಭಕ್ತರ ಮೇಲೆಯೇ ಹಲ್ಲೆ ನಡೆಸಿದ್ದು, ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇನ್ನು ಅವ್ಯವಸ್ಥೆಯ ಕಾರಣದಿಂದ ದರ್ಶನ ಸಿಗದೇ ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿ ಹಲವು ರಾಜ್ಯಗಳ ಭಕ್ತರು ಹಿಂದಿರುಗುತ್ತಿದ್ದಾರೆ.

RELATED ARTICLES

Related Articles

TRENDING ARTICLES