Friday, November 22, 2024

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹೀ ಈದ್ಗಾ ಮಸೀದಿ ಸರ್ವೆಗೆ ಹೈಕೋರ್ಟ್ ಅಸ್ತು

ಮಥುರಾ: ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಮತ್ತು ಶಾಹೀ ಈದ್ಗಾ ಮಸೀದಿ ಪ್ರಕರಣದಲ್ಲಿ  ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಉತ್ತರಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ದೇವಾಲಯದ ಪಕ್ಕದಲ್ಲಿರುವ ಶಾಹೀ ಈದ್ಧಾ ಮಸೀದಿ ಆವರಣದಲ್ಲಿ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಸರ್ವೆ ಕಾರ್ಯ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

ಇದನ್ನೂ ಓದಿ: ನವಜಾತ ಶಿಶುವನ್ನು ಚರಂಡಿಗೆ ಎಸೆದು ಓಡಿದ ಮಹಾತಾಯಿ

17ನೇ ಶತಮಾನದಲ್ಲಿ ನಿರ್ಮಿಸಲಾದ ಮಸೀದಿ ಇರುವ ಜಾಗ ಒಂದು ಕಾಲದಲ್ಲಿ ಶ್ರೀಕೃಷ್ಣ ಜನ್ಮಭೂಮಿಯಾಗಿತ್ತು ಎಂಬ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಅಡ್ವಕೇಟ್ ಕಮಿಷನರ್ ಅವರ ಮೇಲ್ವಿಚಾರಣೆಯಲ್ಲಿ ಮಸೀದಿ ಜಾಗದಲ್ಲಿ ಸರ್ವೆ ನಡೆಸುವಂತೆ ಸೂಚಿಸಿತು. ಸರ್ವೆ ವಿಧಾನ ಹೇಗಿರಬೇಕು ಎಂಬುದನ್ನು ಡಿ. 18ರಂದು ನಡೆಯುವ ಮುಂದಿನ ವಿಚಾರಣೆ ಸಂದರ್ಭದಲ್ಲಿ ತಿಳಿಸಲಾಗುವುದು ಎಂದು ಪೀಠ ಹೇಳಿತು.

 

 

 

RELATED ARTICLES

Related Articles

TRENDING ARTICLES