Wednesday, January 22, 2025

ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದೆ: ಆರ್.ಅಶೋಕ್

ವಿಧಾನಸಭೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪಕ್ಷನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಜುಲೈ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 43 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 1,349 ಗಲಭೆ, 1211 ಫೋಕ್ಸೋ ಪ್ರಕರಣ, 60 ಡಕಾಯಿತಿ, ೮೦೦ಕ್ಕೂ ಹೆಚ್ಚು ಸೈಬರ್ ಅಪರಾಧ ಸೇರಿದಂತೆ ಒಟ್ಟು 43 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಉತ್ತರ ಕರ್ನಾಟದಲ್ಲಿ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲಿಯೇ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅಮಾನವೀಯ ನಡೆದುಕೊಂಡಿರುವುದು ಸೇರಿದಂತೆ ಹಲವು ಘಟನೆ ನಡೆದಿವೆ.

ಇದನ್ನೂ ಓದಿ: ದೇಶದಲ್ಲೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯ ನಮ್ಮದಾಗಬೇಕು: ಸಿದ್ದರಾಮಯ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿದರು. ವಕೀಲರು ಮತ್ತು ಪೊಲೀಸರ ನಡುವೆ ಗಲಾಟೆಯಾಗಿ ಪ್ರತಿಭಟನೆಗಳುನಡೆಯುತ್ತಿವೆ. ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೂ ಧರಣಿ ನಡೆಸಿರುವುದು ಸರ್ಕಾರ ವೈಫಲ್ಯ ಎಂದರು.
ವಕೀಲರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರ್ಕಾರ ಸುಮ್ಮನೆ ಇದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನಾದರೂ ಸರ್ಕಾರ ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು.

 

 

RELATED ARTICLES

Related Articles

TRENDING ARTICLES