Sunday, November 3, 2024

ಘಾಟಿ ದೇವಸ್ಥಾನದಲ್ಲಿ ಜ.31ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ!

ದೊಡ್ಡಬಳ್ಳಾಪುರ: ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ 2024ರ ಜನವರಿ 31ರ ಬೆಳಗ್ಗೆ 11:20 ರಿಂದ 12:20ರವರೆಗೆ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.

ಮಾಂಗಲ್ಯ ಭಾಗ್ಯ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಹೀಗೆ ಒಟ್ಟು 55 ಸಾವಿರ ರೂ.ಗಳನ್ನ ದೇವಾಲಯದ ವತಿಯಿಂದ ಭರಿಸಲಾಗುವುದು.

ಇದನ್ನೂ ಓದಿ: ಬಿಎಂಎಸ್​ಐಟಿ ಕಾಲೇಜಿನಲ್ಲಿ ಕಣ್ಮನ ಸೆಳೆದ ಕಲರವ ಕಾರ್ಯಕ್ರಮ!

ಅದೇ ರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ದೇವಾಲಯದ ಕಾರ್ಯನಿರ್ವಾಹ ಕಚೇರಿಯಲ್ಲಿ ಪಡೆದು ಜನವರಿ 20ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ನೋಂದಾಸಿಕೊಳ್ಳಬೇಕಾಗಿದೆ.

ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ಜನವರಿ 23ರಂದು ದೇವಾಲಯದಲ್ಲಿ ಪ್ರಕಟಿಸಲಾಗುವುದು. ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಜ.25ರೊಳಗಾಗಿ ಸಲ್ಲಿಸಬೇಕಾಗಿದೆ. ಅಂತಿಮ ವಧು-ವರರ ಪಟ್ಟಿಯನ್ನ ಜ.27ರಂದು ಪ್ರಕಟಿಸಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ: 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.

RELATED ARTICLES

Related Articles

TRENDING ARTICLES