Monday, December 23, 2024

ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ: ಸಚಿವ ಮಹದೇವಪ್ಪ

ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ ಎಂದು ಸಚಿವ ಮಹದೇವಪ್ಪ ಕಿಡಿಕಾರಿದ್ದಾರೆ.

2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಅವಧಿ ಸಮೀಪಿಸುತ್ತಿದೆ. ಈ ವೇಳೆ ಭಾರಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದೆ. ಇದರಿಂದ ಲೋಕಸಭೆಯೊಳಗೆ ಆತಂಕ ಸೃಷ್ಟಿ ಆಗಿದ್ದು ನಮ್ಮ ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಸ್ಮೋಕ್​ ಬಾಂಬ್ ದಾಳಿ ಬೆನ್ನಲ್ಲೆ ಬೆಳಗಾವಿ ಸುವರ್ಣ ಸೌಧ ಸುತ್ತ ಕಟ್ಟೆಚ್ಚರ!

ಒಂದು ವೇಳೆ ಅಲ್ಲಿ ಏನಾದರೂ ದೊಡ್ಡ ಅನಾಹುತ ಘಟಿಸಿದ್ದರೆ ಅದಕ್ಕೆ ಯಾರು ಜವಾಬ್ದಾರಿ. ಭದ್ರತಾ ದೃಷ್ಟಿಯಿಂದ ಸಂಸದ ಪ್ರತಾಪ್ ಅವರನ್ನು ತನಿಖೆಗೆ ಒಳಪಡಿಸಬೇಕು ಮತ್ತು ಇದರ ಹಿಂದಿನ ನೈಜ ಕಾರಣಗಳನ್ನು ಪತ್ತೆ ಹಚ್ಚಬೇಕೆಂದು ಈ ಮೂಲಕ ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಸಚಿವ ಡಾ. ಎಚ್.ಸಿ.ಮಹದೇವಪ್ಪ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

 

 

 

RELATED ARTICLES

Related Articles

TRENDING ARTICLES