Wednesday, January 22, 2025

ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ!

ಬೆಂಗಳೂರು: ಪಾರ್ಲಿಮೆಂಟ್​​ ಭವನದ ಒಳಗೆ ಸ್ಮೋಕ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್  ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಪ್ರತಾಪ್ ಸಿಂಹ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

ಇದನ್ನೂ ಓದಿ: ಕಿಲ್ಲರ್ ಬಿಎಂಟಿಸಿಗೆ ಗೃಹಿಣಿ ಬಲಿ!

ನೂತನ ಸಂಸತ್​ ಭವನದಲ್ಲಿ ನಡೆದ ಪ್ರಕರಣದಲ್ಲಿ ಸಂಸದ ಪ್ರತಾಪ್​ ಸಿಂಹ ಹೆಸರಿನಲ್ಲಿ ಪಾಸ್​ ಪಡೆದು ಪ್ರತಿಭಟನಾಕಾರರು ಪಾರ್ಲಿಮೆಂಟ್​ ಒಳ ನುಗ್ಗಿ ಸ್ಮೋಕ್​ ಬಾಂಬ್​ ಸಿಡಿಸಿ ಸಂಸತ್​ನಲ್ಲಿ ಅವಾಂತರ ಸೃಷ್ಟಿಸಿದ್ದ ಹಿನ್ನೆಲೆ ಸಂಸದ ಪ್ರತಾಪ್​ ಸಿಂಹ ಬಂಧನಕ್ಕೆ ಆಗ್ರಹಿಸಿ ಕಾರ್ಯಕರ್ತರು ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿದ್ದು, ಅವರ ಪ್ಲೇ ಕಾರ್ಡ್‌ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಕೂಡಲೇ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES