Monday, December 23, 2024

ರಾಜಸ್ಥಾನದ ನೂತನ ಸಿಎಂ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕಾರ!

ರಾಜಸ್ಥಾನ : ರಾಜಸ್ಥಾನದ ರಾಮ್ ನಿವಾಸ್ ಬಾಗ್‌ನಲ್ಲಿರುವ ಆಲ್ಬರ್ಟ್ ಹಾಲ್‌ನ ಹೊರಗೆ ನಡೆದ ಮುಖ್ಯಮಂತ್ರಿ  ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಭಜನ್ ಲಾಲ್ ಹೊರತಾಗಿ ಬಿಜೆಪಿ ರಾಜಸ್ಥಾನದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಇಂದು ಡಿ. 15 ರಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಇದನ್ನೂ ಓದಿ: 18ಗಂಟೆ ಕ್ಯೂ ನಿಂತು ಕಾದರು ಸಿಗುತ್ತಿಲ್ಲ ಅಯ್ಯಪ್ಪನ ದರ್ಶನ: ಭಕ್ತರು ಆಕ್ರೋಶ!

ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ರಾಜ್ಯದ ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್​ ಸಿಂಗ್, ಏಕನಾಥ್ ಶಿಂಧೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜಸ್ಥಾನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ಅನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಕೇವಲ 69 ಸ್ಥಾನಗಳು ಲಭಿಸಿವೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮವಾಗಿ ಭಜನ್‌ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

RELATED ARTICLES

Related Articles

TRENDING ARTICLES