Wednesday, January 8, 2025

ಮತ್ತೆ ಒಂದಾದ ‘ಬಡವ ರಾಸ್ಕಲ್’ ತಂಡ : ಸದ್ದಿಲ್ಲದೇ ಸೆಟ್ಟೇರಿತು ‘ಅಣ್ಣ From Mexico’

ಬೆಂಗಳೂರು : ಬಡವ ರಾಸ್ಕಲ್ ಚಿತ್ರತಂಡ ಮತ್ತೆ ಒಂದಾಗಿದ್ದು, ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸದ್ದಿಲ್ಲದೇ ‘ಅಣ್ಣ From Mexico’ ಚಿತ್ರದ ಮುಹೂರ್ತ ಮುಗಿಸಿದೆ.

ನಟ ಧನಂಜಯ್ ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ಅಣ್ಣ From Mexico ಚಿತ್ರತಂಡ ಇದೀಗ ಮುಹೂರ್ತ ಮುಗಿಸಿ ಶೂಟಿಂಗ್ ಅಖಾಡಕ್ಕೆ ಹೆಜ್ಜೆ ಇಡಲು ತಯಾರಾಗಿದೆ.

ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ಇಂದು ಧನು ಹಾಗೂ ಶಂಕರ್ ಗುರು ಜೋಡಿಯ ಅಣ್ಣ From Mexico ಸಿನಿಮಾದ ಮುಹೂರ್ತ ನೆರವೇರಿದೆ. ರಾಯಲ ಸ್ಟುಡಿಯೋಸ್ ನ ಪಾಲುದಾರರಾದ ಜಾನ್ವಿ ರಾಯಲ ಕ್ಲ್ಯಾಪ್ ಮಾಡಿದ್ದು, ನಿರ್ದೇಶಕ ಶಂಕರ್ ಗುರು ತಾಯಿ ಕ್ಯಾಮೆರಾಗೆ ಚಾಲನೆ ನೀಡಿದರು. ಸ್ನೇಹಿತ ಹಾಗು ಹಿತೈಷಿಗಳಾದ ಮೃಣಾಲ್ ಹೆಬ್ಬಾಳ್ಕರ್ ರವರು ಸಿನಿಮಾದ ಮುಹೂರ್ತಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.

‘ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ದಿ ರಾಯಲ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಜೊತೆಯಾಗಿ ಕೈ ಜೋಡಿಸಿದೆ. ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಜನವರಿ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ನಡೆಯಲಿದೆ.

ಸಾಲು ಸಾಲು ಚಿತ್ರಗಳಲ್ಲಿ ಡಾಲಿ ಬ್ಯುಸಿ

ಇನ್ನು, ಡಾಲಿ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಉತ್ತರಕಾಂಡ, ಪುಷ್ಪ-2, ಝೀಬ್ರಾ ಹಾಗೂ ಚಿತ್ರದಲ್ಲಿ ಧನು ನಟಿಸುತ್ತಿದ್ದಾರೆ. ಜೊತೆಗೆ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES