Sunday, December 22, 2024

ಶಬರಿಮಲೆಗೆ ಹೊರಟಿದ್ದ ಬಸ್​ ಅಪಘಾತ: ಐವರು ಸಾವು!

ಕೇರಳ: ಶುಕ್ರವಾರ ಸಂಜೆ ಕೇರಳದಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿದೆ. ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್​​ಗೆ ಆಟೋ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್‌ಗೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಆಟೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಡ್ರೈವರ್ ಅಬ್ದುಲ್ ಮಜೀದ್, ಪ್ರಯಾಣಿಕರಾದ ಮುಹ್ಸಿನಾ, ಥಸ್ನೀಮ್, ರಿಯಾಜ್ ಹಾಗೂ ಗುರು ಸಿಗದ ಇನ್ನಿಬ್ಬರು ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಆ್ಯಂಬುಲೆನ್ಸ್​ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮಲಪ್ಪುರಂನಲ್ಲಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KSRTC ಟ್ರೇಡ್ ಮಾರ್ಕ್ ವಿವಾದ ಅಂತ್ಯ: ಕರ್ನಾಟಕಕ್ಕೆ ಜಯ

ದೇವಾಲಯದಲ್ಲಿ ಅವ್ಯವಸ್ಥೆಯ ಆರೋಪ:

ಶಬರಿಮಲೆಯ ಅವ್ಯವಸ್ಥೆ ನಡುವೆಯೇ ಶಬರಿಮಲೆಯತ್ತ ತೆರಳುತ್ತಿರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶಬರಿಮಲೆಯ ಮಾರ್ಗದಲ್ಲಿ ವಾಹನ ದಟ್ಟಣೆ ಕೂಡ ಹೆಚ್ಚಾಗುತ್ತಿದೆ, ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕಿದೆ.

ಶಬರಿಮಲೆ ದೇವಸ್ಥಾನದಿಂದ ಸುಮಾರು ಮುನ್ನೂರು ಕೋಟಿ ರೂಪಾಯಿ ಆದಾಯ ಬಂದರೂ ಕೂಡ ಕೇರಳ ಸರ್ಕಾರ ಇಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಕಲ್ಪಿಸುತ್ತಿಲ್ಲ. ರಸ್ತೆ, ಬಸ್‌, ಶೌಚಾಲಯ ವ್ಯವಸ್ಥೆಯೂ ಇಲ್ಲದೇ ಭಕ್ತರು ಪರದಾಡುತ್ತಿದ್ದಾರೆ. ಮಾಲೆ ಧರಿಸಿ ಬಂದ ಚಿಕ್ಕ ಮಕ್ಕಳು ಹಾಗೂ ವಯಸ್ಸಾದವರಿಗೂ ಯಾವುದೇ ವ್ಯವಸ್ಥೆ ಇಲ್ಲದೇ ಇರುವುದು ಶಬರಿಮಲೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

RELATED ARTICLES

Related Articles

TRENDING ARTICLES