ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಡಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಭತ್ತದ ಬಿತ್ತನೆ ಪ್ರದೇಶವು ನಿಗದಿತ ಗುರಿಗಿಂತ ಶೇ 35ರಷ್ಟು ಕಡಿಮೆಯಾಗಿದ್ದು, ಉತ್ಪಾದನೆಯೂ ಕುಂಠಿತವಾಗಿದೆ. ಹಾಗಾಗಿ, ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಅಕ್ಕಿ ಧಾರಣೆಯು ಶೇ 10ರಿಂದ 20ರಷ್ಟು ಹೆಚ್ಚಳವಾಲಿದೆ.
ಈಗಾಗಲೇ, ದರ ಹೆಚ್ಚಳದಿಂದ ತತ್ತರಿಸಿರುವ ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. ಮತ್ತೊಂದೆಡೆ ರಾಜ್ಯ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೂ ಅಕ್ಕಿ ಪೂರೈಕೆ ಕೊರತೆಯಾಗುವ ಆತಂಕ ಎದುರಾಗಿದೆ. ಸದ್ಯ ಸಗಟು ಮಾರುಕಟ್ಟೆಯಲ್ಲಿ ಒಂದು ಕ್ವಿಂಟಲ್ ಸಾಮಾನ್ಯ ಸೋನಾ ಮಸೂರಿ ಅಕ್ಕಿ ದರ 6 ಸಾವಿರ ಇದ್ದರೆ, ಆರ್‌ಎನ್‌ಆರ್ ಸೋನಾ ತಳಿ ಅಕ್ಕಿ ಧಾರಣೆ 6,500 ಇದೆ.
ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ; 6 ಮಂದಿ ಸಿಸಿಬಿ ಬಲೆಗೆ!
ರಾಜ್ಯದಲ್ಲಿ ಕಳೆದ ವರ್ಷ ಸುಮಾರು 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬಿತ್ತನೆಯಾಗಿತ್ತು. ಈ ಬಾರಿ ಸುಮಾರು 7-8 ಲಕ್ಷ ಹೆಕ್ಟೇರ್ ಪ್ರದೇಶದಲ್ಲಷ್ಟೇ ಬಿತ್ತನೆಯಾಗಿದೆ. ಇದು ಅಕ್ಕಿ ಉತ್ಪಾದನೆ ಕುಸಿತಕ್ಕೆ ಕಾರಣವಾಗಲಿದೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳುತ್ತಾರೆ.