ಬೆಂಗಳೂರು : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಂಸತ್ ಸದಸ್ಯ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮತ್ತೊಂದು ಇದೇ ಮಾದರಿಯ ಸಂಕಷ್ಟ ಎದುರಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದ ಹೇಳಿಕೆ ಕುರಿತು ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಹಾಜರಾಗದ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಸುಲ್ತಾನ್ಪುರದ ಕೋರ್ಟ್ ಸಮನ್ಸ್ ನೀಡಿದೆ.
ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸಂಸದ-ಶಾಸಕ ನ್ಯಾಯಾಲಯವು ಜನವರಿ 6ರಂದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಡಿಸೆಂಬರ್16ರಂದು ಹಾಜರಾಗುವಂತೆ ನ್ಯಾಯಾಲಯವು ಈ ಹಿಂದೆ ಗಾಂಧಿಗೆ ನಿರ್ದೇಶನ ನೀಡಿತ್ತು. ಆದರೆ, ಅವರು ಹಾಜರಾಗಲಿಲ್ಲ. ಹೀಗಾಗಿ ಸಮನ್ಸ್ ಜಾರಿ ಮಾಡಲಾಗಿದೆ. 2018ರ ಆಗಸ್ಟ್ 4ರಂದು ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು.