Wednesday, January 22, 2025

ಹನಿಟ್ರ್ಯಾಪ್ ಪ್ರಕರಣ; 6 ಮಂದಿ ಸಿಸಿಬಿ ಬಲೆಗೆ!

ಬೆಂಗಳೂರು: ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ ಪ್ರಕರಣ ಸಂಬಂಧ ದಂಪತಿ ಸಹಿತ ನಾಲ್ವರು ಆರೋಪಿಗಳನ್ನು CCB ಪೊಲೀಸರು ಬಂಧಿಸಿದ್ದಾರೆ.

ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಗೆ ಬಲೆಬೀಸಿ ಕೆಡ್ಡಕ್ಕೆ ಕೆಡವಿ ಹನಿಟ್ರ್ಯಾಪ್ ಮಾಡಿತ್ತು.

ಇದನ್ನೂ ಓದಿ: ದುಬೈ ಕರೆನ್ಸಿ ಎಂದು ಕಲರ್ ಜೆರಾಕ್ಸ್ ಪೇಪರ್ ಕೊಟ್ಟ ಭೂಪ!

ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್.ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES