Saturday, December 28, 2024

2024ರ ಜನಗಣತಿ ಬಳಿಕ ಮಹಿಳಾ ಮೀಸಲಾತಿ ಜಾರಿಗೆ!

ದೆಹಲಿ: 2024ರ ಜನಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆಯು ಈಗ ವಾಸ್ತವವಾಗಿದೆ. ಏಕೆಂದರೆ ಪ್ರಧಾನಿ ಮೋದಿ ಯಾವಾಗಲೂ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವೂ ಹೆಚ್ಚಿದೆ ಎಂಬುದನ್ನು ಸಾರಿ ಸಾರಿ ಹೇಳುತ್ತಿದ್ದಾರೆ. ಅಮರ್​ ಚಿತ್ರ ಕಥಾ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ, ಸ್ವಾತಂತ್ರ್ಯ ಹೋರಾಟದ ಬುಡಕಟ್ಟು ನಾಯಕರ ಮೂರು ಪುಸ್ತಕಗಳನ್ನು ಪ್ರಕಟಿಸಲು ಕೇಂದ್ರ ಸಂಸ್ಕೃತಿ ಸಚಿವಾಲಯ ನಿರ್ಧರಿಸಿದೆ.

ಇದನ್ನೂ ಓದಿ: ನಾವು ಲಿಂಗಾಯತ ಶಕ್ತಿ ಪ್ರದರ್ಶನ ಮಾಡುತ್ತೇವೆ : ಶಾಮನೂರು ಶಿವಶಂಕರಪ್ಪ

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ತೆರೆಯಲಾಗುವುದು ಎಂದು ಭರವಸೆ ನೀಡಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಪ್ರಯತ್ನಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತು ಮತ್ತು ಸೆಪ್ಟೆಂಬರ್ 29 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅದಕ್ಕೆ ಒಪ್ಪಿಗೆ ನೀಡಿದರು.

RELATED ARTICLES

Related Articles

TRENDING ARTICLES