Friday, January 24, 2025

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಗೆ ದೇವೇಗೌಡರಿಗೆ ಆಹ್ವಾನ

ನವದೆಹಲಿ : ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಆಹ್ವಾನಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗಿರುವ ಶ್ರೀರಾಮ ಮಂದಿರ ಇದೇ ಜನವರಿ 22(2024)ರಂದು ಲೋಕಾರ್ಪಣೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮಂದಿರವನ್ನು ಉದ್ಘಾಟನೆ ಮಾಡಲಿದ್ದಾರೆ.

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕನ್ನಡಿಗ ರಿಷಬ್ ಶೆಟ್ಟಿ ಸೇರಿದಂತೆ ಸಾಕಷ್ಟು ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಇದರ ಭಾಗವಾಗಿ ರಾಮ ಮಂದಿರ ಸಂಕೀರ್ಣ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಹಿರಿಯ ಆರ್​ಎಸ್​ಎಸ್​ ನಾಯಕ ರಾಮ್ ಲಾಲ್ ಮತ್ತು ಹಿರಿಯ ವಿಹೆಚ್​ಪಿ ನಾಯಕ ಅಲೋಕ್ ಕುಮಾರ್ ಅವರು ದೇವೇಗೌಡ ಅವರನ್ನು ನವದೆಹಲಿಯ ನಿವಾಸದಲ್ಲಿ ಭೇಟಿಮಾಡಿ ಆಹ್ವಾನಿಸಿದ್ದಾರೆ.

ಯಾರಿಗೆಲ್ಲಾ ಆಹ್ವಾನ?

ಮೂಲಗಳ ಪ್ರಕಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಶೃಂಗೇರಿಯ ವಿಭುಶೇಖರ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ, ಸಿದ್ಧಗಂಗಾ, ಪುತ್ತೂರು, ಅದಮಾರು, ಶ್ರವಣ ಬೆಳಗೋಳ, ಬೇಲಿಮಠ, ರಂಭಾ ಪುರಿ ಹೀಗೆ ಹಲವು ಮಠಗಳ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆಯಂತೆ. ರಜನಿಕಾಂತ್, ಮೋಹನ್‌ ಲಾಲ್, ಚಿರಂಜೀವಿ, ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ನಟರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES