Sunday, December 22, 2024

ಅರ್ಷದೀಪ್ ತೂಫಾನ್ ಬೌಲಿಂಗ್ : ದಕ್ಷಿಣ ಆಫ್ರಿಕಾದ 7ನೇ ವಿಕೆಟ್ ಪತನ

ಬೆಂಗಳೂರು : ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವೇಗಿ ಅರ್ಷದೀಪ್ ಸಿಂಗ್ ತೂಫಾನ್ ಬೌಲಿಂಗ್​ಗೆ ಹರಿಣಗಳು ಕಂಗಾಲಾಗಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಲೆಕ್ಕಾಚಾರವನ್ನು ಭಾರತದ ಬೌಲರ್​ಗಳು ಉಲ್ಟಾ ಮಾಡಿದ್ದಾರೆ. ಭರ್ಜರಿ ಪ್ರದರ್ಶನ ನೀಡಿದ ಅರ್ಷದೀಪ್ ಪ್ರಮುಖ 4 ವಿಕೆಟ್ ಕಿತ್ತು ಹರಿಣಗಳಿಗೆ ದೊಡ್ಡ ಆಘಾತ ನೀಡಿದ್ದಾರೆ.

ರೀಜಾ ಹೆಂಡ್ರಿಕ್ಸ್ (0), ಟೋನಿ ಡಿ ಜೋರ್ಜಿ (28), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (0) ಹಾಗೂ ಹೆನ್ರಿಚ್ ಕ್ಲಾಸೆನ್ (6) ವಿಕೆಟ್ ಕಬಳಿಸಿದರು. ಇತ್ತ ಅವೇಶ್ ಖಾನ್ ಕೂಡ ಮೂರು ವಿಕೆಟ್ ಉರುಳಿಸಿದ್ದಾರೆ. ವಿಯಾನ್ ಮುಲ್ಡರ್ 0, ನಾಯಕ ಏಡೆನ್ ಮಾರ್ಕ್ರಾಮ್ 12 ಹಾಗೂ ಡೇವಿಡ್ ಮಿಲ್ಲರ್ 2 ರನ್ ಗಳಿಸಿ ಅವೇಶ್ ಖಾನ್​ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದಾರೆ.

ಸದ್ಯ ದಕ್ಷಿಣ ಆಫ್ರಿಕಾ 16 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 73 ರನ್ ಗಳಿಸಿದೆ. ಆಂಡಿಲ್ ಫೆಹ್ಲುಕ್ವಾಯೊ 11, ಕೇಶವ್ ಮಹಾರಾಜ್ 4 ರನ್​ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಭಾರತ ತಂಡ

ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ

ಏಡೆನ್ ಮಾರ್ಕ್ರಾಮ್ (ನಾಯಕ), ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ತಬ್ರೈಜ್ ಶಮ್ಸಿ

RELATED ARTICLES

Related Articles

TRENDING ARTICLES