Sunday, December 15, 2024

MS ಧೋನಿ​ ವಿರುದ್ದ ಮ್ಯಾಚ್ ಫಿಕ್ಸಿಂಗ್​ ಆರೋಪ ಮಾಡಿದ್ದ IPS​ ಅಧಿಕಾರಿಗೆ ಜೈಲು ಶಿಕ್ಷೆ!

ಚನ್ನೈ: ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಎಂಎಸ್​ ಧೋನಿ ಮೇಲೆ ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದ್ದ ಐಪಿಎಸ್​ ಅಧಿಕಾರಿ ಸಂಪತ್ ಕುಮಾರ್​ ಅವರಿಗೆ ಮದ್ರಾಸ್ ಹೈಕೋರ್ಟ್​ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

2013ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಮ್ಯಾಚ್​ ಫಿಕ್ಸಿಂಗ್ ಆರೋಪ ಕೇಳಿ ಬಂದಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮ್ಯಾಚ್​ ಫಿಕ್ಸಿಂಗ್ ಮಾಡಿದ್ದಾರೆ. ಅವರು ಬುಕ್ಕಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪ್ರಕರಣದ ತನಿಖೆ ನಡೆಸಿದ್ದ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ನಮ್ಮ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಪ್ರಯಾಣಿಕರ ಪರದಾಟ!

ಈ ಆರೋಪದ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, 2014 ರಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಎಂಎಸ್‌ ಧೋನಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

RELATED ARTICLES

Related Articles

TRENDING ARTICLES