Sunday, January 19, 2025

ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲೇ ವಿಷ್ಣು ಪುಣ್ಯಭೂಮಿ ಆಗ್ಬೇಕು: ಕಿಚ್ಚ ಸುದೀಪ್

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್​ ಅವರ ಸ್ಮಾರಕ ಹಾಗೂ ಪುಣ್ಯಭೂಮಿಗೆ ಸಂಬಂಧಿಸಿದಂತೆ ಮೊದಲಿನಿಂದಲೂ ಗೊಂದಲಗಳು ಏರ್ಪಟ್ಟಿವೆ. ಈ ಕುರಿತು ನಟ ಕಿಚ್ಚ ಸುದೀಪ್​ ಅವರು ಮತ್ತೊಮ್ಮೆ ತಮ್ಮ ಅನಿಸಿಕೆ ಏನು ಎಂಬುದನ್ನು ಹಂಚಿಕೊಂಡಿದ್ದಾರೆ.

ಇಂದು ವಿಷ್ಣುವರ್ಧನ್​ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್​ ಅವರು ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಸುದೀಪ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘ಸಲಾರ್’ ಮೂವಿ ಟಿಕೆಟ್​ ಬುಕಿಂಗ್​ಗೆ ಭರ್ಜರಿ ರೆಸ್ಪಾನ್ಸ್​!

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದು ‘ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ’ ಎಂದು ಕಿಚ್ಚ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES