Monday, December 23, 2024

ದೇಶದ 41 ಕಡೆ NIA ದಾಳಿ : ಬೆಂಗ್ಳೂರಿನಲ್ಲಿ ಸೋಡಿಯಂ ನೈಟ್ರೇಟ್ ಪತ್ತೆ

ಬೆಂಗಳೂರು: ದೇಶದಾದ್ಯಂತ 41 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ತಳ ದಾಳಿ ನಡೆಸಿದೆ. ಉಗ್ರ ಚಟುವಟಿಕೆಯ ಬಗ್ಗೆ ಮಹತ್ವದ ಸುಳಿವು ಲಭಿಸಿದ ಕಾರಣ ಈ ದಾಳಿ ನಡೆದಿದ್ದು ಬೆಂಗಳೂರಿನಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ.

ಇದನ್ನು ಸ್ಫೋಟಕಗಳಲ್ಲಿ ಬಳಕೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ ಬಳ್ಳಾರಿ ಮೂಲದ ಶಮೀವುಲ್ಲಾ ಅವರ ಬಾಡಿಗೆ ಮನೆಯಲ್ಲಿ ಇದು ಪತ್ತೆಯಾಗಿದ್ದು ಅಫ್ಘಾನಿಸ್ತಾನಕ್ಕೆ ತೆರಳಿ ಕುಕೃತ್ಯ ನಡೆಸಲು ಸ್ಕೆಚ್ ಹಾಕಲಾಗಿತ್ತು ಎಂದು ವರದಿಯಾಗಿದೆ

ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ NIA, 16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಿದ್ದರು. ಅದರಂತೆ ಅಲಿ ಅಬ್ಬಾಸ್ ಮೊಬೈಲ್, ಲ್ಯಾಪ್ ಟಾಪ್ ರಿಟ್ರೀವ್ ಮಾಡಲಾಗಿತ್ತು. ಈ ವೇಳೆ ಮಹತ್ವದ ಮಾಹಿತಿ ಕಲೆ ಹಾಕಿದ್ದ NIA ಅಧಿಕಾರಿಗಳು, ಇಂದು ಮತ್ತೆ ನಗರದ ಹಲವೆಡೆ ದಾಳಿ ನಡೆಸಿದ್ದಾರೆ.

NIA ಅಧಿಕಾರಿಗಳು ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

 

RELATED ARTICLES

Related Articles

TRENDING ARTICLES