ಚಿಕ್ಕಮಗಳೂರು : ಬೆಳಗಾವಿಯಲ್ಲಿ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕುಟುಕಿದ್ದಾರೆ.
ಚಿಕ್ಕಮಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸತ್ಯಶೋಧನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಎಲ್ಲಾ ಕ್ರಮವನ್ನ ತೆಗೆದುಕೊಂಡಿದೆ. ST ಕಮಿಷನ್ ಜೊತೆ ಕೇಂದ್ರದ ತಂಡ ತನಿಖೆ ಮಾಡಿದೆ. ರಾಜಕೀಯಕ್ಕಾಗಿ ಬಿಜೆಪಿ ನಾಲ್ಕೈದು ಎಂಪಿಗಳನ್ನ ಕಳುಹಿಸಿದೆ. ಈ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಲಾಭದ ಲೆಕ್ಕಾಚಾರದಲ್ಲಿದೆ ಎಂದು ಚಾಟಿ ಬೀಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ: ಬಸವರಾಜ ಬೊಮ್ಮಾಯಿ ಟೀಕೆ
ದತ್ತ ಜಯಂತಿ ಶಾಂತಿಯುತವಾಗಿ ನಡೆಯಬೇಕು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ 24 ರಿಂದ ದತ್ತ ಜಯಂತಿ ನಡೆಯಲಿದೆ. ದತ್ತ ಜಯಂತಿ ಶಾಂತಿಯುತವಾಗಿ ನಡೆಯಬೇಕು ಎನ್ನುವುದು ಅನ್ನೋದು ನಮ್ಮ ಉದ್ದೇಶವಾಗಿದೆ. ದತ್ತ ಜಯಂತಿ ಪ್ರಯುಕ್ತ ಇಲಾಖೆಯಿಂದ ಏನು ಆಗಬೇಕು ಅಂತ ಚರ್ಚಿಸಲು ಚಿಕ್ಕಮಗಳೂರಿಗೆ ಬಂದಿದ್ದೇನೆ. ಪೊಲೀಸ್ ಇಲಾಖೆಯಿಂದ ಏನೆಲ್ಲಾ ಆಗಬೇಕು ಚರ್ಚೆ ಮಾಡುತ್ತೇನೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.