Wednesday, January 22, 2025

ಟಾಸ್ ಸೋತ ಭಾರತ : ಸೂಪರ್ ಸ್ಟಾರ್ ‘ರಿಂಕು ಸಿಂಗ್’ ಪದಾರ್ಪಣೆ

ಬೆಂಗಳೂರು : ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಮಾರ್ಕ್ರಾಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಗ್ವೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್ ಬದಲಿಗೆ ಗ್ರೇಟ್ ಫಿನಿಷರ್ ರಿಂಕು ಸಿಂಗ್​ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಮೊದಲ ಪಂದ್ಯ ಗೆದ್ದು ಬೀಗಿರುವ ಕನ್ನಡಿಗ ಕೆ.ಎಲ್. ರಾಹುಲ್ ಪಡೆ, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಳ್ಳುವ ಹಂಬಲದಲ್ಲಿದೆ. ವೇಗಿಗಳಾದ ಅರ್ಷ್​ದೀಪ್ ಸಿಂಗ್ ಹಾಗೂ ಅವೇಶ್ ಖಾನ್ ಮಾರಕ ದಾಳಿಯಿಂದ ಮೊದಲ ಪಂದ್ಯದಲ್ಲಿ ಭಾರತ ಜಯ ಗಳಿಸಿತ್ತು. ಹೀಗಾಗಿ, ಬೌಲಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಭಾರತ ತಂಡ

ಕೆ.ಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ತಂಡ

ಐಡೆನ್ ಮಾರ್ಕ್ರಾಮ್(ನಾಯಕ), ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್

RELATED ARTICLES

Related Articles

TRENDING ARTICLES