ಹುಬ್ಬಳ್ಳಿ: ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಲಿಸಿದ್ಧಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 6 ತಿಂಗಳ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟೀಕಾಪ್ರಹಾರ ಮಾಡಿದ್ದರು.
ರಾಜ್ಯದ ಪ್ರಗತಿ ಶೂನ್ಯ
ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ನಮ್ಮ ಅವಧಿಯಲ್ಲಿ ಅನುಷ್ಠಾನಗೊಂಡ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ. ರಾಜ್ಯದ ಪ್ರಗತಿ ಶೂನ್ಯವಾಗಿದೆ ಎಂದು ಆರೋಪಿಸಿದರು.
ಬಂಡವಾಳ ವೆಚ್ಚ ಕಡಿಮೆಯಾಗುತ್ತಿದೆ.
ಪ್ರತಿ ವರ್ಷ ಬಂಡವಾಳ ವೆಚ್ಚ ಏರಿಕೆಯಾಗಬೇಕು. ಆದರೆ, ಅಧಿವೇಶನದಲ್ಲಿ ಮಂಡಿಸಿದ ಮಧ್ಯಂತರ ಹಣಕಾಸು ವರದಿಯಲ್ಲಿ ಬಂಡವಾಳ ವೆಚ್ಚ ಕಳೆದ ಐದು ವರ್ಷಗಳಲ್ಲಿ ಕಡಿಮೆಯಾಗಿರುವುದು ರಾಜ್ಯ ಹಣಕಾಸು ಸ್ಥಿತಿಗೆ ಹಿಡಿದ ಕನ್ನಡಿ ಎಂದು ಹೇಳಿದರು.
ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬೇಡಿ
ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ, ರಾಜ್ಯಕ್ಕೆ ಬರಬೇಕಾದ ಅನುದಾನ, ಹಣಕಾಸು ನೆರವು ನೀಡುತ್ತಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.
ಅಭಿವೃದ್ಧಿ ಯೋಜನೆಗಳ ಬಗ್ಗೆ ವರದಿ ನೀಡಲಿ
ಕೇಂದ್ರ ಸರ್ಕಾರ ಆಯಾ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡುತ್ತಿದೆ. ಕೇಂದ್ರ ಸರ್ಕಾರ, ರಾಜ್ಯಕ್ಕೆ ನೀಡಿರುವ ಅನುದಾನ, ಪರಿಹಾರ, ಆರ್ಥಿಕ ನೆರವಿನ ಬಗ್ಗೆ ಸದ್ಯದಲ್ಲೇ ನಾವು ಲೆಕ್ಕ ಕೊಡುತ್ತೇವೆ ಎಂದು ಹೇಳಿದರು. ಅಭಿವೃದ್ಧಿ ಯೋಜನೆಗಳ ವರದಿ ನೀಡಲಿ ಎಮದರು