Thursday, May 9, 2024

ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಬಗೆಹರಿಸುವಂತೆ ಆಗ್ರಹ

ಯಾದಗಿರಿ : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳಿಗಾಗಿ ನಿರಂತರ ಪ್ರತಿಭಟನೆಯಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಂತಹ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ವಿದ್ಯಾರ್ಥಿಗಳು ಒತ್ತಾಯಿಸಿದರು. ನಗರದ ಪದವಿ ಕಾಲೇಜಿನಿಂದ ಆರಂಭವಾದ ಮೆರವಣಿಗೆ ನೇತಾಜಿ ವೃತ್ತದವರೆಗೆ ಬೃಹತ್ ರ್ಯಾಲಿ ಮಾಡಿದರು.

ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ. ಮತ್ತೊಂದೆಡೆ ಸೆಮಿಸ್ಟರ್ ಪರಿಕ್ಷೆಗಳ ದಿನಾಂಕ ಸಮೀಪಿಸುತ್ತಿದೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ. ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಇನ್ನೂ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಪರವಾಗಿ ಯಾದಗಿರಿ ಗ್ರೇಡ್-2 ತಹಸೀಲ್ದಾರರು ಭೇಟಿ ನೀಡಿದ್ದು ಮನವಿ ಸ್ವೀಕರಿಸಿ ಸರ್ಕಾರಕ್ಕೆ ರವಾನಿಸಲಾಗುವುದು ಎಂದು ಹೇಳಿದರು.

RELATED ARTICLES

Related Articles

TRENDING ARTICLES