Monday, December 23, 2024

ನಾಳೆ ಗ್ರಾ. ಪಂ, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ಡಿಸೆಂಬರ್ 20 ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಬಳ್ಳಾಪುರ ಟೌನ್ ನ ಎಲ್ & ಟಿ ಫ್ಯಾಕ್ಟರಿ ಬಳಿಯ ವಿದ್ಯಾದಾನ್ ಶಾಲೆ ಮುಂಭಾಗದಲ್ಲಿರುವ ಲೋಟಸ್ ಅರೇನಾದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳಲಾಗಿದೆ.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಕೋಚಿಮುಲ್‌ನಲ್ಲಿ ನೇಮಕಾತಿ ಅಕ್ರಮ: ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆಕ್ರೋಶ!

ಐಟಿ.ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ಶಾಸಕರಾದ ಶರತ್‌ ಕುಮಾರ್ ಬಚ್ಚೇಗೌಡ, ನೆಲಮಂಗಲ ಶಾಸಕರಾದ ಶ್ರೀನಿವಾಸಯ್ಯ.ಎನ್, ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಮಂಜುನಾಥ್, ಉಪಾಧ್ಯಕ್ಷರಾದ ಪುಷ್ಪ ಶಿವಕುಮಾರ್, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಇತರರು ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES