ಬೆಂಗಳೂರು: ಕೊರೋನಾ ಪಾಸಿಟಿವ್ ಬಂದ್ರೆ 10 ದಿನ ಹೋಂ ಕ್ವಾರಂಟೈನ್ನಲ್ಲಿ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ಕೊರೋನಾ ಪಾಸಿಟಿವ್ ಇರಲಿ, ಇಲ್ಲದಿರಲಿ ಕುಟುಂಬದವರಿಗೆ ಟೆಸ್ಟಿಂಗ್ ಇರುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೊರೋನಾ ಪರೀಕ್ಷೆ ಮಾಡಲಾಗುತ್ತದೆ. RT-PCR ಪರೀಕ್ಷೆ ಕೂಡ ಉಚಿತ ಎಂದು ತಿಳಿಸಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಬಗ್ಗೆ ನಾಳೆ ನಿರ್ಧಾರ ಮಾಡ್ತೀವಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಗ್ರಾಮಸ್ಥರ ಮೇಲೆ ಲಾಂಗ್ ಬೀಸಿದ ಯುವಕ!
ಈಗಾಗಲೇ ನೆರೆಯ ಕೇರಳ, ಗೋವಾ, ಮಹಾರಾಷ್ಟ್ರ ಒಮಿಕ್ರಾನ್ನ ರೂಪಾಂತರಿ JN.1 ಪತ್ತೆಯಾಗಿದ್ದು ರಾಜ್ಯದಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಚಿವರು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಮಾಹಿತಿ ನೀಡಿದ್ದಾರೆ.