Sunday, December 8, 2024

Heart Attack: ಹೃದಯಾಘಾತಕ್ಕೆ 7ನೇ ತರಗತಿ ವಿದ್ಯಾರ್ಥಿನಿ ಬಲಿ

ಚಿಕ್ಕಮಗಳೂರು:ಚಿಕ್ಕಮಗಳೂರಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ  ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

13 ವರ್ಷದ ಬಾಲಕಿ ಸೃಷ್ಟಿ ಮೃತಪಟ್ಟ ಬಾಲಕಿಯಾಗಿದ್ದಾಳೆ.

 ಘಟನೆಯ ವಿವರ:

ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ಶಾಲೆಗೆ ತೆರಳುತ್ತಿದ್ದಾಗ ಹಠಾತ್‌ ಆಗಿ ಕುಸಿದು ಬಿದ್ದಿದ್ದಾಳೆ. ಹೀಗಾಗಿ ಸೃಷ್ಟಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಆಕೆ ಮೃತಪಟ್ಟಿದ್ದಾಳೆ. ಬಳಿಕ ಪರೀಕ್ಷೆ ನಡೆಸಿದ ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತವಾಗಿದೆ ಎಂದು ಹೇಳಿದ್ದಾರೆ.

ಪ್ರಾಥಮಿಕ ಆಸ್ಪತ್ರೆಯಲ್ಲಿ ಇಲ್ಲ ಎಂದು ಆಕ್ರೋಶ 

ದಾರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇರಲಿಲ್ಲ. ಅಲ್ಲದೆ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಸಹ ಇಲ್ಲ. ಈ ಕಾರಣದಿಂದ ಬಾಲಕಿಯೊಬ್ಬಳು ಮೃತಪಟ್ಟಂತೆ ಆಗಿದೆ ಎಂದು ಗ್ರಾಮಸ್ಥರು ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ರೂಪಾಂತರ ತಳಿ ಕೊರೊನಾಗೆ ಮೊದಲ ಬಲಿ : ಸಚಿವ ದಿನೇಶ್ ಗುಂಡೂರಾವ್

ಗ್ರಾಮದಲ್ಲೇ ಆಸ್ಪತ್ರೆಯಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮೂಡಿಗೆರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸೃಷ್ಟಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಗೋಳಿಡುತ್ತಿದ್ದಾರೆ.

 

RELATED ARTICLES

Related Articles

TRENDING ARTICLES