Wednesday, January 22, 2025

ಬೆಂಗಳೂರಿನಲ್ಲಿ ‘ಕೋಟಿ ಗೀತಾಯಜ್ಞ ಸಮಿತಿ’ಯಿಂದ ಗೀತೋತ್ಸವ ಕಾರ್ಯಕ್ರಮ

ಬೆಂಗಳೂರು : ಭಗವದ್ಗೀತೆಯ ಸಾರವನ್ನು ಹಾಗೂ ಅದರ ಆಯಾಮಗಳನ್ನು ಜನರಿಗೆ ತಲುಪಿಸುವ ಮೂಲ ಉದ್ದೇಶದಿಂದ ‘ಕೋಟಿ ಗೀತಾಯಜ್ಞ ಸಮಿತಿ’ ವತಿಯಿಂದ ಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಉಡುಪಿಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶೀರ್ವಾದದಿಂದ ಶ್ರೀ ಗೋವರ್ಧನಗಿರಿ ಮಠದ ಆಶ್ರಯದಲ್ಲಿ ಕೋಟಿ ಗೀತಾ ಲೇಖನ ಯಜ್ಞ ಸಮಿತಿಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಶನಿವಾರ ಹಾಗೂ ಭಾನುವಾರ ಎರಡು ದಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. ಬಾವಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದ ಕೋಟ್ಯಾನುಕೋಟಿ ಜನರು ಸೇರಿ ಭಗವದ್ಗೀತೆಯನ್ನು ಬರೆದು ಉಡುಪಿ ಶ್ರೀಕೃಷ್ಣನಿಗೆ ತಲುಪಿಸಲಾಗುವುದು.

ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಾನಿಧ್ಯ

ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಸಾನಿಧ್ಯದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿ ವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಲಿದ್ದಾರೆ. ಎರಡು ದಿನಗಳು ನಡೆಯುವ ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪುಸ್ತಕ ಮಳಿಗೆಗಳು ಕೂಡ ಇರಲಿವೆ. ಹಾಗೆಯೇ ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES